17-8-2021. ಮಂಗಳವಾರ.
E-ಯಲ್ಲಾಪುರ.

ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ ಸಿಂಗ್ ಅವರು ಮಂಗಳವಾರ ಯಲ್ಲಾಪುರಕ್ಕೆ ಭೇಟಿ ನೀಡಿದ್ದರು. ಪಟ್ಟಣದ ಬಿಕ್ಕು ಗುಡಿಗಾರ್ ಕಲಾಕೇಂದ್ರಕ್ಕೆ ಆಗಮಿಸಿದ್ದ ಅವರು ಕಲಾಕೇಂದ್ರದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠ ಸಂಸ್ಥಾನಕ್ಕೆಂದು ನಿರ್ಮಿಸಲಾಗುತ್ತಿರುವ ಬೃಹತ್ ರಥವನ್ನು ವೀಕ್ಷಿಸಿದರು.

–ADVT–

ಈ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಸಚಿವರು, ರಥದ ನಿರ್ಮಾಣವನ್ನು ವೀಕ್ಷಿಸಲೆಂದು ಬಂದಿದ್ದೇನೆ. ರಾಜಕೀಯದ ಕುರಿತು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

–ADVT–

ಈ ಸಂದರ್ಭದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜೀ, ಪ್ರಮುಖರಾದ ಟಿ.ಈಶ್ವರ್, ಧರ್ಮದರ್ಶಿ ಜಂಬಯ್ಯ ನಾಯಕ ಮುಂತಾದವರು ಇದ್ದರು. ಗುಡಿಗಾರ ಕಲಾ ಕೇಂದ್ರದ ಸಂತೋಷ್ ಗುಡಿಗಾರ್, ಅರುಣ ಗುಡಿಗಾರ್ ಅವರು ಸಚಿವರನ್ನು ಸ್ವಾಗತಿಸಿದರು.

–ADVT–

ಸುದ್ದಿ-2
ಯಲ್ಲಾಪುರ : ಪಟ್ಟಣದ ಅಡಕೆ ಭವನದಲ್ಲಿ ಭಾರತೀಯ ಜನತಾ ಪಕ್ಷ ತಾಲೂಕಾ ಮಂಡಲದ ವತಿಯಿಂದ ಮಂಗಳವಾರ ಆಯೋಜಿಸಿದ್ದ ” ಬೂತ್ ಅಧ್ಯಕ್ಷರ ಸಮಾವೇಶ ”

ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಉಧ್ಘಾಟಿಸಿದರು.

–ADVT–

ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೊಳಿಸುವ ಜನಪರ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿಸುವ ಕಾರ್ಯಗಳ ಜೊತೆಯಲ್ಲಿ ಮುಂಬರುವ ತಾಲೂಕಾ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ಶ್ರಮಿಸುವಂತೆ ಬೂತ್ ಅಧ್ಯಕ್ಷರುಗಳಿಗೆ ಸಚಿವರು ಕರೆ ನೀಡಿದರು.

–ADVT–


ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ಪ್ರಧಾನಕಾರ್ಯದರ್ಶಿ ಗೋವಿಂದ ನಾಯ್ಕ ಹಾಗೂ ಬಿಜೆಪಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್ ಗಾಂವ್ಕರ್, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನಾಗರಾಜ ನಾಯಕ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

–ADVT–


ಸುದ್ದಿ-3
ಸಚಿವ ಶಿವರಾಮ ಹೆಬ್ಬಾರ್ ಅವರಿಂದ ವೈಯಕ್ತಿಕವಾಗಿ 1000 ಪೌಷ್ಟಿಕಾಂಶ ಕಿಟ್ ವಿತರಣೆ
ಯಲ್ಲಾಪುರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುತಿಸಿರುವ ಕಡಿಮೆ ತೂಕ ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದ ಮಕ್ಕಳಿಗೆ 1000 ಪೌಷ್ಟಿಕಾಂಶ ಕಿಟ್ ಅನ್ನು ವೈಯಕ್ತಿಕ ನೀಡುತ್ತಿದ್ದಾರೆ.

–ADVT–

ಇಂದು ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸಾಂಕೇತಿಕವಾಗಿ ಪೌಷ್ಟಿಕಾಂಶ ಕಿಟ್ ಅನ್ನು ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ್ , ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/BrL0e7zB8Qo1yeFemCvdus

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading