4-10-2021. ಸೋಮವಾರ.

E-YELLAPUR.COM NEWS.
ಯಲ್ಲಾಪುರ ತಾಲೂಕಿನಲ್ಲಿ ಇಂದು 7 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ದೇಹಳ್ಳಿಯಲ್ಲಿ 4, ಕುಂದರಿಯಲ್ಲಿ ಒಬ್ಬರಿಗೆ, ನಂದೊಳ್ಳಿಯಲ್ಲಿ ಒಬ್ಬರಿಗೆ ( ಯಲ್ಲಾಪುರ ನಗರವೂ ಸೇರಿದಂತೆ), ಕಳಚೆಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಕೋವಿಡ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ADVT

ತಾಲೂಕಿನಲ್ಲಿ 31 ಸಕ್ರೀಯ ಕೋವಿಡ್ ಪ್ರಕರಣ ಇವೆ. ಇಂದು 11 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇಂದು 285 ಜನರ ಸ್ವಾಬ್ ಟೆಸ್ಟ್ ಮಾಡಲಾಗಿದೆ. ಇನ್ನೂ 190 ಜನರ ಸ್ವಾಬ್ ಟೆಸ್ಟ್ ವರದಿ ಬರಬೇಕಿದೆ.

ADVT

ನಾಳೆ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 2530 ಡೋಸ್ ಕೋವಿಡ್ ಲಸಿಕೆ ಲಭ್ಯ ಇದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ್ ತಿಳಿಸಿದ್ದಾರೆ.

ಯಲ್ಲಾಪುರ ; ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ.

ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಕೊಡುಗೆಯಾಗಿ ನೀಡಿದ ನೋಟ್ ಬುಕ್‍ಗಳನ್ನು ಸೋಮವಾರ ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುನಂದಾ ದಾಸ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಉತ್ತಮ ಕಲಿಕೆಯತ್ತ ಗಮನಹರಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾದ ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಶಾಮಿಲಿ ಪಾಟಣಕರ್ ಸಾಮಾಜಿಕ ಕಾರ್ಯಕರ್ತ ಡಾ ರವಿ ಭಟ್ ಬರಗದ್ದೆ ಮಾತನಾಡಿದರು. ಪಟ್ಟಣ ಪಂಚಾಯತಿ ಸ್ಥಾಯಿ ಸಮೀತಿಯ ಅಧ್ಯಕ್ಷ ಅಮಿತ್ ಅಂಗಡಿ, ಸಚಿವರ ಕಛೇರಿಯ ಸಿಬ್ಬಂದಿ ಮನೋಜ್ ನಾಯ್ಕ್ ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕ ದೇವಿದಾಸ ಪಟಗಾರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶ್ರೀಧರ ಹೆಗಡೆ ನಿರೂಪಿಸಿದರು ನಾರಾಯಣ ನಾಯಕ ವಂದಿಸಿದರು. ಹಾಗೂ ಶಾಲೆಯ ಎಲ್ಲ ಶಿಕ್ಷಕ ಬಳಗದವರು ಪಾಲ್ಗೊಂಡರು.

===============

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589/

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/FIBfndirvSLCTUzJq4BMP1

===============

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading