
5-10-2021. ಮಂಗಳವಾರ.
E-YELLAPUR.COM.NEWS.

ಕಠಿಣ ಪರಿಶ್ರಮ, ನಿಶ್ಚಿತವಾದ ಗುರಿ ಇದ್ದರೆ ಯಾವುದೇ ಸಾಧನೆ ಮಾಡಲು ಸಾಧ್ಯವಿದೆ ಎಂದು ಟೋಕಿಯೋ ಒಲೆಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಿರಜ್ ಚೋಪ್ರಾ ಅವರ ತರಬೇತುದಾರರಾದ ಕಾಶಿನಾಥ ನಾಯ್ಕ ಹೇಳಿದರು.
ಅವರು ಮಂಗಳವಾರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬೆಳಕಿನಂದ ಸಾಂಸ್ಕೃತಿಕ ಪ್ರತಿಷ್ಠಾನದ ಕ್ರೀಡಾ ವಿಭಾಗದಿಂದ ಹಮ್ಮಿಕೊಂಡ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕಾರ್ಗಿಲ್ ಯುದ್ದದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ ನನಗೆ ಯಾವುದೇ ಕೋಚ್ ಇರಲಿಲ್ಲ. ಆಗ ಅಲ್ಲಿನ ಸೈನ್ಯಾಧಿಕಾರಿಗಳೇ ಮಾರ್ಗದರ್ಶನ ನೀಡಿದರು. ಹೀಗಾಗಿ ಸಾಧನೆ ಸಾಧ್ಯವಾಯಿತು ಎಂದು ವಿವರಿಸಿದರು.

ADVT

ಸಾಧನೆ ಮಾಡಬೇಕಾದರೆ ಕಷ್ಟಗಳು ಸಹಜ. ಕಷ್ಟಗಳನ್ನು ಮೀರಿ ಬದುಕಿದಾಗ ಮಾತ್ರ ಸಾಧನೆ ಸಾಧ್ಯ. ಗ್ರಾಮೀಣ ಭಾಗದವರು ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುದು ಸುಳ್ಳು. ಸಾಧನೆ ಮಾಡಲು ಮುಖ್ಯವಾಗಿ ಸ್ಪರ್ಧಾತ್ಮಕ ಮನೋಭಾವನೆ ಅಗತ್ಯ. ಮಕ್ಕಳು ಮೊಬೈಲ್ ನಲ್ಲಿ ಆಟ ಆಡುವ ಬದಲು ಮೈದಾನದಲ್ಲಿ ಆಡಿದರೆ ಆರೋಗ್ಯ ದೊರೆಯುತ್ತದೆ ಎಂದರು.
ಕಾಶಿನಾಥ ನಾಯ್ಕ ಅವರನ್ನು ಸನ್ಮಾನಿಸಿದ ಲೆಕ್ಕ ಪರಿಶೋಧಕರಾದ ವಿಘ್ನೇಶ್ವರ ಗಾಂವ್ಕರ್ ಅವರು ಮಾತನಾಡಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಅವರು ಇದ್ದರು.
ವಿದ್ಯಾರ್ಥಿನಿ ನೀಕಿತಾ ಜಿ ನಾಯಕ ಪ್ರಾರ್ಥಿಸಿದರು. ರಾಘವೇಂದ್ರ ನಾಯ್ಕ ಸ್ವಾಗತಿಸಿದರು. ಮಹೇಶ ನಾಯ್ಕ ನಿರ್ವಹಿಸಿದರು. ಗುರು ಭಟ್ ವಂದಿಸಿದರು.
ADVT

ಕ್ರೀಡಾ ಅಕಾಡೆಮಿ ಸ್ಥಾಪನೆಯ ಕನಸು…
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇವೆ. ಇಂತಹ ಪ್ರತಿಭೆಗಳಿಗೆ ತರಬೇತಿ ನೀಡಿ ಮುಖ್ಯ ವಾಹಿನಿಗೆ ತರುವ ಕನಸು ನನ್ನದು. ಹೀಗಾಗಿ ಮುಂದಿನ ವರ್ಷ ಕ್ರೀಡಾ ಅಕಾಡೆಮಿ ಸ್ಥಾಪಿಸುವ ಚಿಂತನೆ ಇದೆ.
=== ಕಾಶಿನಾಥ ನಾಯ್ಕ, ರಾಷ್ಟ್ರೀಯ ಕ್ರೀಟಾಪಟು

ಮಕ್ಕಳೊಂದಿಗೆ ಬೆರೆತ ಕಾಶಿನಾಥ ನಾಯ್ಕ
ಟೋಕಿಯೋ ಒಲೆಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಿರಜ್ ಚೋಪ್ರಾ ಅವರ ತರಬೇತುದಾರರಾದ ಕಾಶಿನಾಥ ನಾಯ್ಕ ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿದರು. ಮೊದಲು ಕ್ರಿಕೆಟ್ ಬಾಲ್ ಎಸೆಯುವ ಮೂಲಕ ಪ್ರಾರಂಭಿಸಿದ ಅವರು ನಂತರ ಜಾವೆಲಿನ್ ಎಸೆತ ಮಾಡಿಸಿದರು.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/













