15-10-2021. ಶುಕ್ರವಾರ.

E-YELLAPUR. COM NEWS.

ವಿಜಯ ದಶಮಿಯ ಪ್ರಯುಕ್ತ ಯಲ್ಲಾಪುರ ಪಟ್ಟಣದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದಲ್ಲಿಇಂದು ಬೆಳಿಗ್ಗೆ ಪುಟ್ಟ ಮಕ್ಕಳಿಗೆ ಅಕ್ಷರಾರಂಭ ಕಾರ್ಯಕ್ರಮ ನಡೆಯಿತು. ಶ್ರೀದೇವರಿಗೆ ಪೂಜೆ ಸಲ್ಲಿಸಿ ಮಕ್ಕಳಿಗೆ ಶಾಸ್ತ್ರೋಕ್ತವಾಗಿ ವಿದ್ಯಾರಂಭ ಮಾಡಿಸಲಾಯಿತು.

ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಗೋಪಾಲಕೃಷ್ಣ ಭಟ್ಟ ಅವರ ನೇತ್ರತ್ವ ಹಾಗೂ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಿತು. ಗಣಪತಿ ಪೂಜೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ವಾಗ್ದೇವಿಯ ಪೂಜೆ, ಶಾರದಾ ಪೂಜೆಯ ನಂತರ ಪ್ರಾರ್ಥನೆ ಸಲ್ಲಿಸಲಾಯಿತು.

ಮಕ್ಕಳನ್ನು ತಾಯಂದಿರ ಮಡಿಲಲ್ಲಿ ಕೂರಿಸಿಕೊಂಡು, ಅಕ್ಕಿ ತುಂಬಿದ ಹರಿವಾಣದಲ್ಲಿ ಅಕ್ಷರಗಳನ್ನು ಬರೆಸುವ ಮೂಲಕ ವಿದ್ಯಾರಂಭ ಮಾಡಿಸಲಾಯಿತು. ನಂತರ ಶ್ರೀದೇವರಿಗೆ ಮಹಾಮಂಗಳಾರತಿ ನಡೆಯಿತು.

ADVT

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589/

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/FIBfndirvSLCTUzJq4BMP1

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading