8.11.2021. ಸೋಮವಾರ.

e-yellapur.com news

ಯಲ್ಲಾಪುರದಲ್ಲಿ ನಡೆಯುತ್ತಿರುವ ಸಂಕಲ್ಪ ಉತ್ಸವದ ಎರಡನೇ ದಿನದ ಕಾರ್ಯಕ್ರಮವನ್ನು ರವಿವಾರ ಸಂಜೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ಲೋಕದಲ್ಲಿ ಸಂಕಲ್ಪ ಉತ್ಸವದ್ದು ದೊಡ್ಡ ಹೆಸರು. ಸಂಸ್ಥೆಯ ಸಾಧನೆ ದೊಡ್ಡದು. ಈ ಉತ್ಸವದಲ್ಲಿ ಪಾಲ್ಗೊಳ್ಳುವುದು ಖುಷಿಯ ಸಂಗತಿಯಾಗಿದೆ. ಇಂತಹ ಉತ್ಸವಕ್ಕೆ ಸರ್ಕಾದಿಂದ ಎಲ್ಲಾ ರೀತಿಯ ಪ್ರೋತ್ಸಾಹ ಸಿಗುವಂತಾಗಲಿ ಎಂದರು

ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರಮೋದ ಹೆಗಡೆಯವರು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುವ ಕೌಶಲ್ಯ ಇದೆ. ನಿರಂತರವಾಗಿ 35 ವರ್ಷ ಸಂಕಲ್ಪ ಉತ್ಸವ ನಡೆಸುತ್ತಿರುವುದು ದಾಖಲೆಯಾಗಿದೆ. ಈ ಉತ್ಸವವು ನಾಡಿನ ಸಾಂಸ್ಕೃತಿಕ ಅಭಿರುಚಿ ಹೆಚ್ಚಿಸುತ್ತಿದೆ. ಸಮಾಜ ಸಮ್ರದ್ಧವಾಗಿರಲು ಇಂತಹ ಕಲಾ ಅಭಿರುಚಿ ಅವಶ್ಯ ಎಂದರು.

ಶಾಸಕಿ ರೂಪಾಲಿ ನಾಯ್ಕ , ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ್,
ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್ ಮಾತನಾಡಿದರು‌
ಸಂಕಲ್ಪದ ಅಧ್ಯಕ್ಷ ಪ್ರಮೋದ ಹೆಗಡೆ ಅಭಿನಂದನಾ ಮಾತನಾಡಿದರು.
ಸಂಕಲ್ಪದ ವತಿಯಿಂದ ಬಸವರಾಜ ಹೊರಟ್ಟಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ನಂತರ ಭರತ ನಾಟ್ಯ ಹಾಗೂ ದಕ್ಷಯಜ್ಞ ಯಕ್ಷಗಾನ ಪ್ರದರ್ಶನ ನಡೆಯಿತು.

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589/

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/JH4e982fHYEHI2R9vegqPh

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading