26-1-2022. ಬುಧವಾರ.

E-YELLAPUR.COM NEWS.
ಯಲ್ಲಾಪುರ.
ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ, ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ಮಾತನಾಡಿ, ದೇಶದ ಪ್ರಗತಿಯಲ್ಲಿ ನಮ್ಮದಾದ ಕೊಡುಗೆಯನ್ನು ನಾವೆಲ್ಲರೂ ನೀಡಬೇಕು ಎಂದರು. ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಯೋಜನಾ ಸಮೀತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಸಿಪಿಐ ಸುರೇಶ ಯಳ್ಳೂರು, ಲೋಕೋಪಯೋಗಿ ಇಲಾಖೆಯ ಎಇಇ ವಿನಾಯಕ ಭಟ್ಟ, ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್, ಗ್ರೇಡ್-2 ತಹಸೀಲ್ದಾರ್ ಸಿ.ಜಿ.ನಾಯ್ಕ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂಗನಬಸಯ್ಯ ಮುಂತಾದವರು ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಸ್ವಾಗತಿಸಿದರು. ಶಿಕ್ಷಕ ಶ್ರೀಧರ ಹೆಗಡೆ ನಿರ್ವಹಿಸಿದರು. ವಿ.ಎಂ.ಭಟ್ಟ ವಂದಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.

e-yellapur.com news ನಲ್ಲಿ ಸುದ್ದಿ ಹಾಗೂ ಜಾಹಿರಾತು ಪ್ರಕಟಣೆಗಾಗಿ ಸಂಪರ್ಕಿಸಿ – ಫೋ ; 8762966078

ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ.

E-YELLAPUR.COM NEWS.

ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ.ವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಪ್ರಾಂಶುಪಾಲೆ ಡಾ.ದಾಕ್ಷಾಯಣಿ ಜಿ. ಹೆಗಡೆ ಮಾತನಾಡಿ, ವಿಧ್ಯಾರ್ಥಿಗಳು ಉತ್ತಮ ಧ್ಯೇಯವನ್ನು ಇಟ್ಟುಕೊಂಡು ದೇಶದ ಪ್ರಗತಿಯಲ್ಲಿ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕು ಎಂದರು. ನಿವೃತ್ತ ಪ್ರಾಚಾರ್ಯ ಎಸ್.ವಿ.ಕಟ್ಟಿ, ರಾಜೇಂದ್ರ ಬದ್ದಿ, ಎಂ.ಎಂ.ಶೇಖ್, ಭಾಸ್ಕರ್ ಭಟ್ಟ, ಗೋಪಾಲಕೃಷ್ಣ ನೇತ್ರೇಕರ್,ನಿವೃತ್ತ ಆಯ್ಕೆ ಶ್ರೇಣಿಯ ಗ್ರಂಥಪಲಕ ಎಂ.ಎಂ.ಹೆಬ್ಬಳ್ಳಿ,ಪ್ರಾಂಕಿತ ವ್ಯವಸ್ಥಾಪಕ ಎನ್.ಬಿ.ಮೆಣಸುಮನೆ,ಪ್ರಾಧ್ಯಾಪಕರಾದ ಸುರೇಖಾ ತಡವಲ್,ಸವಿತಾ ನಾಯ್ಕ, ಡಿ.ಎಸ್.ಭಟ್ಟ,ರಾಮಕೃಷ್ಣ ಗೌಡ, ಡಿ.ಜಿ.ತಾಪಸ್ ಮುಂತಾದವರು ಇದ್ದರು.

ADVT

ಚಿತ್ರ ಸುದ್ದಿ

ಯಲ್ಲಾಪುರ ತಾಲೂಕಿನ ಮಂಚಿಕೇರಿಯಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಯವರು ಭಾಗವಹಿಸಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

ಯಲ್ಲಾಪುರ ಪಟ್ಟಣದ ಪಟ್ಟಣ ಪಂಚಾಯತಿ ಕಚೇರಿಯ ಆವಾರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಪ.ಪಂ.ಅಧ್ಯಕ್ಷೆ ಸುನಂದಾ ದಾಸ್ ಹಾಗೂ ಸರ್ವ ಸದಸ್ಯರು, ಮುಖ್ಯಾಧಿಕಾರಿ ಸಂಗನಬಸಯ್ಯಾ ಹಾಗೂ ಸಿಬ್ಬಂದಿಗಳು ಇದ್ದರು.

ಯಲ್ಲಾಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಆವಾರದಲ್ಲಿ ಗಣರಾಜ್ಯೋತ್ಸವದ ನಿಮಿತ್ತ ಧ್ವಜಾರೋಹಣ ನೆರವೇರಿಸಲಾಯಿತು. ಕಸಾಪ ಪ್ರಮುಖರಾದ ವೇಣುಗೋಪಾಲ ಮದ್ಗುಣಿ, ಬೀರಣ್ಣ ನಾಯಕ,ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ,ಜಯರಾಮ ಗುನಗಾ,ಡಿ.ಜಿ.ಹೆಗಡೆ, ಜಿ.ಎನ್.ಭಟ್ ತಟ್ಟಿಗದ್ದೆ, ಉಲ್ಲಾಸ್ ಶಾನಭಾಗ ಮುಂತಾದವರು ಇದ್ದರು.

ಸೂಚನೆ ; e-yellapur.com News ನಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಅನುಮತಿ ಇಲ್ಲದೇ ನಕಲು ಮಾಡುವುದನ್ನು ನಿರ್ಭಂಧಿಸಲಾಗಿದೆ.

FACEBOOK GROUP – https://www.facebook.com/groups/593852164946589/

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.

https://chat.whatsapp.com/L2CReGIOXdX7UXCxXicb4Q

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading