22-2-2022. ಮಂಗಳವಾರ.

E-YELLAPUR.COM NEWS ಯಲ್ಲಾಪುರ :
ಪರಿಸರ ಹಾಗೂ ಜೀವವೈವಿಧ್ಯವನ್ನು ಸಂರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಸಹಾಯಕ
ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ ಹೇಳಿದರು. ಪಟ್ಟಣದ ಹೋಲಿರೋಜರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ನಡೆದ ತಾಲೂಕಾ ಮಟ್ಟದ ವಿಜ್ಞಾನ ಮಾದರಿ ತಯಾರಿಕಾ ಸ್ಫರ್ಧೆ, ಪ್ರಬಂಧ ಮಂಡನೆ, ಜೀವವೈವಿಧ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವ ವೈವಿಧ್ಯದ ಮಾದರಿಯಲ್ಲಿ ಮಾನವನ ಹಸ್ತಕ್ಷೇಪದಿಂದ ಅದು ಶೀಥಿಲತೆ ಹೊಂದಿದೆ. ಪರಿಸರ,ಅರಣ್ಯ, ಪ್ರಾಣಿ ಸಂಕುಲವನ್ನು ಸಂರಕ್ಷಿಸಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ ಜೀವ ವೈವಿಧ್ಯದ ದಾಖಲೆಗಳ ಪುಸ್ತಕ ಅನಾವರಣಗೊಳಿಸಿ ಸಾಂದರ್ಭಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ಪ್ರದರ್ಶನವನ್ನು ತಾಲೂಕಾ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಜಗದೀಶ ಕಮ್ಮಾರ ಉಧ್ಘಾಟಿಸಿದರು. ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವೈಜ್ಞಾನಿಕ ಪ್ರಗತಿಯು ಪರಿಸಕ್ಕೆಪೂರಕವಾಗಿರಬೇಕು ಅದನ್ನು ನಾವು ಅಳವಡಿಸಿಕೊಳ್ಳಬೇಕು ಎಂದರು.

ADVT

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಸ್ವಾಗತಿಸಿದರು, ಎಂ. ರಾಜಶೇಖರ ವಂದಿಸಿದರು.ಚಂದ್ರಶೇಖರ ಎಸ್.ಸಿ. ನಿರೂಪಿಸಿದರು. ವೇದಿಕೆಯಲ್ಲಿ ವಿಜ್ಞಾನ ಬಳಗದ ಅಧ್ಯಕ್ಷ ಸಂತೋಷ ಶೆಟ್ಟಿ, ಫಾ ರೇಮಂಡ್ ಫರ್ನಾಂಡಿಸ್, ಸಂತೋಷ ಜಗಳೂರ, ಪ್ರಶಾಂತ ಜಿ.ಎನ್, ವೆಂಕಟೇಶ ಪಾಲನಕರ, ನಿತೀಶ ತೋರ್ಕೆ ಮುಂತಾದವರು ಇದ್ದರು.

ತಾಲೂಕಿ 25 ಪ್ರೌಢಶಾಲೆಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಔಷದಿ ಸಸ್ಯ ಸಂಗ್ರಹ, ಕರಕುಶಲ ವಸ್ತು ಪ್ರದರ್ಶನ, ಚಿತ್ರಕಲಾ ಸ್ಪರ್ಧೆ ನಡೆದವು, ಜಿಲ್ಲಾ ಉಪ ಪ್ರಾದೇಶಿಕ ಕೇಂದ್ರದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆಯ ಬಹುಮಾನ ನೀಡಲಾಯಿತು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು, ಸರಕಾರಿ ಪ್ರೌಢಶಾಲೆಯ ಶ್ರಾವಣಿ ಆಚಾರಿ ಚಿತ್ರಿಸಿದ ವರ್ಣಚಿತ್ರಗಳನ್ನು ಅನಾವರಣಗೊಳಿಸಲಾಯಿತು ಹಾಗೂ ಬಹುಮನ ನೀಡಲಾಯಿತು. ಯೋಜನೆಯನ್ನು ಮಂಡಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ನೀಡಲಾಯಿತು, ಜೀವವೈವಿಧ್ಯತೆಯ ಮೇಲೆ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಯೋಜನೆಯನ್ನು ಮಂಡಿಸಿದರು.

ಇಂದು ತಾಲೂಕಿನ ಕಿರವತ್ತಿಯಲ್ಲಿ ಓರ್ವ ವ್ಯಕ್ತಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ತಾಲೂಕಿನಲ್ಲಿ 16 ಸಕ್ರೀಯ ಕೋವಿಡ್ ಪ್ರಕರಣಗಳು ಇವೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ

FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading