26-2-2022. ಶನಿವಾರ.

26-2-2022. ಶನಿವಾರ
E-YELLAPUR.COM NEWS ಯಲ್ಲಾಪುರ.
ನಮ್ಮತನವನ್ನು ಹಾಗೂ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಲು 2020ರಲ್ಲಿ ಹೊಸ ಶಿಕ್ಷಣ ನೀತಿಯನ್ನು ದೇಶದಲ್ಲಿ ಜಾರಿಗೆ ತರಲಾಗಿದೆ. ಈ ಶಿಕ್ಷಣ ನೀತಿಯು ಮಕ್ಕಳ ಸಮಗ್ರ ಬೆಳವಣಿಗೆಗೆ ಅನುಕೂಲವಾಗಿದೆ ಎಂದು ದಾಂಡೇಲಿಯ ಬಂಗೂರುನಗರ ಪದವಿ ಕಾಲೇಜಿನ ಉಪನ್ಯಾಸಕ ಡಾ.ಆರ್.ಜಿ.ಹೆಗಡೆ ಹೇಳಿದರು.

ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆ, ತಾಲೂಕಾ ಅಡಕೆ ವರ್ತಕರ ಸಂಘ, ಭಾರತ ಸೇವಾದಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಪಟ್ಟಣದ ಅಡಕೆ ಭವನದಲ್ಲಿ ನಡೆದ ಸಿ.ಬಿ.ಎಸ್.ಇ.ಹಾಗೂ ಎನ್.ಇ.ಪಿ.ಕುರಿತ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಕುರಿತು ಮಾತನಾಡಿದರು.

ADVT

ಬೆಳಗಾವಿಯ ಕೆ.ಎಲ್.ಇ. ಇಂಟರ್ ನ್ಯಾಶನಲ್ ಸ್ಕೂಲ್ ಉಪನ್ಯಾಸಕ ಪ್ರೋ, ಪ್ರವೀಣ ಚಂದಿಲ್ಕರ್ ಸಿಬಿಎಸ್‍ಇ ಪಠ್ಯಕ್ರಮದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. . ತಾಲೂಕಾ ಅಡಕೆ ವರ್ತಕರ ಸಂಘದ ಅಧ್ಯಕ್ಷ ರವಿ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ಭಾರತ ಸೇವಾದಳದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಧರ ಶೆಟ್ಟಿ, ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ಗಿರೀಶ ಭಾಗ್ವತ್, ಮಾತೃಮಂಡಳಿಯ ಅಧ್ಯಕ್ಷೆ ರಮಾ ದೀಕ್ಷಿತ್ ಇದ್ದರು. ಉಪನ್ಯಾಸಕ ಡಿ.ಕೆ.ಗಾಂವ್ಕಾರ್ ಸ್ವಾಗತಿಸಿ,ನಿರೂಪಿಸಿದರು.

ನಾಳೆ ಸಂತ ಸೇವಾಲಾಲ್ ಜಯಂತ್ಯೋತ್ಸವ.

ಸಂತ ಸೇವಾಲಾ ಮಹಾರಾಜರ 283ನೇ ಜಯಂತ್ಯೋತ್ಸವ ಕಾರ್ಯಕ್ರಮವು ನಾಳೆ ಬೆಳಿಗ್ಗೆ 9.30ಕ್ಕೆ ಪಟ್ಟಣದ ಅಡಕೆಭವನದಲ್ಲಿ ನಡೆಯಲಿದೆ. ಸಿಂಧಗಿಯ ಕೆಸರೆಟ್ಟಿಯ ಸೋಮಲಿಂಗ ಸ್ವಾಮೀಜೀಯವರು ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವ ಶಿವರಾಮ ಹೆಬ್ಬಾರ್ ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದು, ಸಚಿವ ಪ್ರಭು ಚವ್ಹಾಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭಿಮ್ ಸಿಂಗ್ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ

FACEBOOK GROUP – https://www.facebook.com/groups/593852164946589/

group ಗೆ join ಆಗಿ.

OLD POSTS…

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading