19-2022. ಶನಿವಾರ.

ಇ-ಯಲ್ಲಾಪುರ ಡಾಟ್ ಕಾಂ ನ್ಯೂಸ್.

ಯಲ್ಲಾಪುರ ತಾಲೂಕಿನ ಕಣ್ಣೀಗೇರಿ ಪಂಚಾಯಿತಿ ವ್ಯಾಪ್ತಿಯ ಕನ್ನಡಗಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ, ಆಧಿಕಾರಿಗಳಿಂದ ಮನವಿ ಸ್ವಿಕಾರ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಶನಿವಾರ ನಡೆಯಿತು.

ADVT

ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ಗಿಡ ನೆಡುವುದರ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿಗಳ ಪರವಾಗಿ ತಹಶಿಲ್ದಾರರು ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಆರೋಗ್ಯ ಇಲಾಖೆಯ ಗಿರೀಶ ತಿಮ್ಮನಗೌಡ ಅವರು ಕೋವಿಡ್ ವ್ಯಾಕ್ಸೀನ್ ಮತ್ತು ಚಿಕ್ಕಮಕ್ಕಳ ವ್ಯಾಕ್ಸಿನೇಷನ್ ಬಗ್ಗೆ ಮಾಹಿತಿ ನೀಡಿದರು.

ADVT

ಪಶುವೈದ್ಯಕೀಯ ಇಲಾಖೆಯ ಡಾ. ಸುಬ್ರಾಯ ಭಟ್ಟ ಸ್ಥಳೀಯವಾಗಿ ಸಾಕುಪ್ರಾಣಿಗಳಲ್ಲಿ ಕಂಡುಬರುವ ರೇಬಿಸ್ ಮತ್ತು ಬ್ರಸಿಲ್ಲೋಸಿಸ್ ರೋಗದ ಬಗ್ಗೆ ಅರಿವು ಮೂಡಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರಫೀಕಾ ಹಳ್ಳೂರ ಗರ್ಭಿಣಿ ಮತ್ತು ಬಾಣಂತಿಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾತನಾಡಿದರು. ಮನಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ADVT

ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ಕೋಳಿಕೆರೆ ಸಮೀಪದ ಗೌಳಿವಾಡಾಕ್ಕೆ ಭೇಟಿ ನೀಡಿ, ಕುಂದುಕೊರತೆಗಳನ್ನು ವಿಚಾರಿಸಿ, ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಜಿಲ್ಲಾ ಪಂಚಾಯತ್ ಇಲಾಖೆ ಅಶೋಕ್ ಬಂಟ, ಟಿ.ಎಚ್.ಒ. ಡಾ. ನರೇಂದ್ರ ಪವಾರ್, ಎ.ಡಿ.ಎಲ್.ಆರ್. ಸರ್ವೆ ಅಧಿಕಾರಿ ವನಿತಾ ಪಾಟೀಲ್, ಅಬಕಾರಿ ಇಲಾಖೆಯ ಅನಿಲ್ , ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ನಾಗರಾಜ್ ನಾಯ್ಕ, ಹೆಸ್ಕಾಂ ಇಲಾಖೆಯ ರವಿ ಪಾಟೀಲ್ , ಗ್ರೇಡ್ 2 ತಹಶಿಲ್ದಾರ ಚಂದ್ರಕಾಂತ ನಾಯಕ್,

ಕಂದಾಯ ಇಲಾಖೆ ನಿರೀಕ್ಷಕಿ ಜ್ಯೋತಿ ನಾಯ್ಕ, ಗ್ರಾಮ ಲೆಕ್ಕಾಧಿಕಾರಿ ಪ್ರೀತಿ ಗಚ್ಛಿ, ಗ್ರಾಪಂ ಅಧ್ಯಕ್ಷ ಮಹೇಶ್ ಕಾಸರಕರ್ ಮುಂತಾದವರು ಉಪಸ್ಥಿತರಿದ್ದರು. ಪಿಡಿಒ ನಾರಾಯಣ ಗೌಡ ಸ್ವಾಗತಿಸಿದರು, ಶಿಕ್ಷಕ ಶಂಕರಾನಂದ ದೇವದಾಸ್ ನಿರೂಪಣೆ ಮಾಡಿದರು. ಸಾಮಾಜಿಕ ಕಾರ್ಯಕರ್ತ ಶ್ರೀಪತಿ ಭಟ್ ಹಿಟ್ಟಿನಬೈಲ್ ಅತಿಥಿಗಳಿಗೆ ಊಟೋಪಚಾರ ವ್ಯವಸ್ಥೆ ಮಾಡಿದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading