24-3-2022. ಗುರುವಾರ.

ಇ-ಯಲ್ಲಾಪುರ ಡಾಟ್ ಕಾಂ ನ್ಯೂಸ್.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶೃಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಮತ್ತು ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಆರೋಗ್ಯ ಇಲಾಖೆಯ ಮುಂಚೂಣಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಪಟ್ಟಣದ ಅಡಕೆ ಭವನದಲ್ಲಿ ಗುರುವಾರ ನಡೆಯಿತು.

ADVT

ಈ ಕಾರ್ಯಕ್ರಮವನ್ನು ಉಧ್ಘಾಟಿಸಿದ ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್ ಮಾತನಾಡಿ, ಆರೋಗ್ಯ ರಕ್ಷಣೆಯತ್ತ ನಾವು ವಿಶೇಷ ಕಾಳಜಿ ವಹಿಸಬೇಕು. ನಮ್ಮ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ

ADVT

ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್ ಮಾತನಾಡಿ, ಎಲ್ಲರಿಗೂ ಆರೋಗ್ಯ ಬಹಳ ಮುಖ್ಯ. ಮುಂಜಾಗ್ರತೆ ಇರಲಿ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ಮಾತನಾಡಿದರು.

ADVT

ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಆಶಾ ಕಾರ್ಯಕರ್ತೆಯರಾದ ನಂದೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪದ್ಮಾ, ವಜೃಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬಿಕಾ ಹಾಗೂ

ನಂದೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷತಾ ಅಧಿಕಾರಿ ಮಂಜುಳಾ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಆರೋಗ್ಯ ನಿರೀಕ್ಷಕ ಮಹೇಶ ತಾಳಿಕೋಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ ನಿರ್ವಹಿಸಿದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading