27-3-2022. ರವಿವಾರ.

ಇ-ಯಲ್ಲಾಪುರ ಡಾಟ್ ಕಾಂ ನ್ಯೂಸ್.

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರಿಕ್ಷೆಗೆ ಯಲ್ಲಾಪುರ ತಾಲೂಕಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ತಿಳಿಸಿದ್ದಾರೆ.

ADVT

ಈ ಕುರಿತು ಮಾಹಿತಿ ನೀಡಿದ ಅವರು, ತಾಲೂಕಿನಲ್ಲಿ ಆರು ಪರಿಕ್ಷಾ ಕೇಂದ್ರಗಳಿವೆ. ಪರಿಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಕ್ಯಾಮರಾ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಮೂಲಭೂತ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ADVT

ಈ ಕೇಂದ್ರಗಳಲ್ಲಿ ತಾಲೂಕಿನ ಒಟ್ಟೂ 1161 ವಿಧ್ಯಾರ್ಥಿಗಳು ಪರಿಕ್ಷೆ ಬರೆಯಲಿದ್ದಾರೆ. 75 ಕೋಠಡಿಗಳನ್ನು ಸಜ್ಜುಗೊಳಿಸಲಾಗಿದೆ. 6 ಪರಿಕ್ಷಾ ಕೇಂದ್ರಗಳ ಮುಖ್ಯಸ್ಥರು, 9 ಸ್ಥಾನಿಕ ಜಾಗೃತದಳ, 3 ತಾಲೂಕು ಮಟ್ಟದ ಜಾಗೃತದಳ,

ADVT

2 ಜಿಲ್ಲಾ ಮಟ್ಟದ ಅಧಿಕಾರಿಗಳು ದೈಹಿಕ ಅಂತರ ಕಾಪಾಡಲು ದೈಹಿಕ ಶಿಕ್ಷಕರು, ಪ್ರತಿ ಕೇಂದ್ರಕ್ಕೆ ಆರೋಗ್ಯ ಸಿಬ್ಬಂದಿಗಳು, ಕೋವಿಡ್ ಸೋಂಕಿತ ವಿಧ್ಯಾರ್ಥಿಗಳಿದ್ದರೆ ಅವರಿಗೆ ಪ್ರತ್ಯೇಕ ಕೋಠಡಿ,

ADVT

3 ರೂಟ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಈಗಾಗಲೇ ಪರಿಕ್ಷಾ ಕೇಂದ್ರದ ಪ್ರತಿ ಕೊಠಡಿಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading