29-4-2022. ಶುಕ್ರವಾರ.

E-YELLAPUR.COM NEWS ಯಲ್ಲಾಪುರ.

ಯಲ್ಲಾಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ನಿರ್ಮಿಸಲಾದ ಅರಣ್ಯ ಇಲಾಖೆಯ ನೂತನ ವಸತಿ ಸಂಕೀರ್ಣವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ಉದ್ಘಾಟಿಸಿದರು.

ADVT

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಲಸ ಮಾಡುವ ಸಿಬ್ಬಂದಿಗಳು ಮಾನಸಿಕವಾಗಿ ನೆಮ್ಮದಿಯಿಂದ ಇದ್ದಾಗ ಮಾತ್ರ ಶಾಂತಿಯುತವಾಗಿ ಕೆಲಸ ಮಾಡುವುದಕ್ಕೆ ಸಾಧ್ಯವಾಗುತ್ತದೆ ಈ ಕಾರಣಕ್ಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಉತ್ತಮ ಗುಣಮಟ್ಟದ ವಸತಿ ಸಂಕೀರ್ಣವನ್ನು ನಿರ್ಮಿಸಲಾಗಿದೆ ಎಂದರು.

ADVT

ಕಳೆದ ಎರಡು ವರ್ಷಗಳಿಂದ ಯಲ್ಲಾಪುರದಲ್ಲಿ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ ಹೊಂದುತ್ತಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆಯವರ ಸೇವೆಯನ್ನು ಶ್ಲಾಘಿಸಿದ ಸಚಿವರು, ಹೆಗಡೆಯವರ ನಿವೃತ್ತಿ ಜೀವನಕ್ಕೆ ಶುಭಕೋರಿದರು.

1.20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಈ ವಸತಿ ಸಂಕೀರ್ಣವು 6 ಮನೆಗಳನ್ನು ಹೊಂದಿದ್ದು, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳು ಹಾಗೂ ಕಚೇರಿಯ ಪ್ರಥಮ ದರ್ಜೆಯ ಸಹಾಯಕ ಸಿಬ್ಬಂದಿಗಳ ವಾಸಕ್ಕೆಂದು ನಿರ್ಮಿಸಲಾಗಿದೆ.

ADVT

ಈ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ, ಸಾಮಾಜಿಕ ಕಾರ್ಯಕರ್ತ ವಿಜಯ ಮಿರಾಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹಿಮವತಿ ಭಟ್ , ಆನಂದ ಎಚ್.ಎನ್, ವಲಯ ಅರಣ್ಯಾಧಿಕಾರಿಗಳಾದ ಬಾಲಸುಬ್ರಹ್ಮಣ್ಯ, ಪ್ರಸಾದ ಪೆಡ್ನೇಕರ, ಎಚ್.ಎನ್.ನದಾಫ್, ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

ಹೊಸದಾಗಿ ಅತಿಕ್ರಮಿಸಿ ಕಟ್ಟಲಾದ ಮನೆ ತೆರವು.

ಪಟ್ಟಣದ ರಾಮಾಪುರ ಅರಣ್ಯ ಪ್ರದೇಶದಲ್ಲಿ ಹೊಸದಾಗಿ ಅತಿಕ್ರಮಿಸಿ ನಿರ್ಮಿಸಲಾಗಿದ್ದ ಮನೆಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದಾರೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading