30-4-2022. ಶನಿವಾರ.

E-YELLAPUR.COM NEWS ಯಲ್ಲಾಪುರ.

ಯಲ್ಲಾಪುರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಗೋಪಾಲಕೃಷ್ಣ ಹೆಗಡೆಯವರು ವಯೋನಿವೃತ್ತಿಯಾದ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಸಂಜೆ ಅರಣ್ಯ ಇಲಾಖೆಯ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವಿಕೇಂದ್ರೀಕರಣ ಯೋಜನೆಯ ಉಪಾಧ್ಯಕ್ಷ ಪ್ರಮೋಧ ಹೆಗಡೆ,

ಗೋಪಾಲಕೃಷ್ಣ ಹೆಗಡೆಯವರ ಧರ್ಮಪತ್ನಿ ರೂಪಾ ಹೆಗಡೆ, ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಮುಂಡಗೋಡ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಂ.ವಾಲಿ ಗೋಪಾಲಕೃಷ್ಣ ಭಟ್ಟ ಕೈಶೆಟ್ಟಿಮನೆ, ಉಪಸ್ಥಿತರಿದ್ದರು. ಅರಣ್ಯ ಇಲಾಖೆಯ ಅಧಿಕಾರಿಗಳು, ಕಚೇರಿಯ ಸಿಬ್ಬಂದಿಗಳು, ಅರಣ್ಯ ಗುತ್ತಿಗೆದಾರರು, ಮಲೆನಾಡು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ,

ಎಲ್.ಎಸ್.ಎಂ.ಪಿ.ಸೊಸೈಟಿಯ ಅಧ್ಯಕ್ಷ ನಾಗರಾಜ ಕೌಡಿಕೆರೆ, ಹಾಗೂ ವಿವಿಧ ಗ್ರಾಮ ಅರಣ್ಯ ಸಮಿತಿಯ ಪ್ರಮುಖರು ವಿವಿಧ ಸಂಘ,ಸಂಸ್ಥೆಗಳ ಪ್ರತಿನಿಧಿಗಳು, ಅಭಿಮಾನಿಗಳು ಗೋಪಾಲಕೃಷ್ಣ ಹೆಗಡೆಯವರನ್ನು ಸನ್ಮಾನಿಸಿ, ಗೌರವಿಸಿದರು. ಗೋಪಾಲಕೃಷ್ಣ ಹೆಗಡೆಯವರನ್ನು ಅಭಿನಂದಿಸಿ, ಮಾತನಾಡಿದರು.
ಎಸಿಎಫ್ ಹಿಮವತಿ ಭಟ್ ಮಾತನಾಡಿ ಗೋಪಾಲಕೃಷ್ಣ ಹೆಗಡೆಯವರು ಉತ್ತಮವಾಗಿ ಮಾರ್ಗದರ್ಶನ ನೀಡಿದ್ದಾರೆ, ಅವರ ತಾಳ್ಮೆ ಅನುಕರಣೀಯ ಎಂದರು.

ಎಸಿಎಫ್ ಆನಂದ, ಕ ಚೇರಿಯ ವ್ಯವಸ್ಥಾಪಕ ಆನಂದ ದೇಸಾಯಿ, ಕಚೇರಿಯ ಪರಶಿವಮೂರ್ತಿ, ಮಾತನಾಡಿ ಅಭಿನಂದಿಸಿದರು. ಯಲ್ಲಾಪುರ ವಲಯ ಅರಣ್ಯಾಧಿಕಾರಿ ಬಾಲಸುಬ್ರಹ್ಮಣ್ಯ ಮಾತನಾಡಿ, ಕಿರಿಯರಿಗೆ ಮಾದರಿಯಾಗಿದ್ದಾರೆ , ಸೌಮ್ಯ ಸ್ವಭಾವದ ಅವರ ಗುಣ ನಮಗೆಲ್ಲ ಮಾರ್ಗದರ್ಶಿಯಾಗಿದೆ ಎಂದರು. ಉಪವಲಯ ಅರಣ್ಯಾಧಿಕಾರಿ ಸಂಘದ ವತಿಯಿಂದ ಮಂಜುನಾಥ ಮುಂತಾದವರು ಮಾತನಾಡಿದರು. ಮರಿಬಸವನಗೌಡ, ಅಲ್ಥಾಪ್ ಚೌಕಡಾಕ, ಎನ್.ಎಚ್.ಕಲಾಲ್
ಇದೇ ಸಂದರ್ಭದಲ್ಲಿ ಅರಣ್ಯ ಸಂರಕ್ಷಕ ವೃತ್ತಿಯಿಂದ ವಯೋನಿವೃತ್ತಿ ಹೊಂದಿದ ನಾಗಪ್ಪ ಅವರನ್ನು ಗೌರವಿಸಿ, ಬೀಳ್ಕೊಡಲಾಯಿತು.
ಶಹನಾಜ್ ಮುಲ್ತಾನಿ ಪ್ರಾರ್ಥಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆನಂದ ಸ್ವಾಗತಿಸಿದರು. ಸಿಬ್ಬಂದಿ ಶ್ರೀಶೈಲ ನಿರ್ವಹಿಸಿದರು.

ಗೋಪಾಲಕೃಷ್ಣ ಹೆಗಡೆಯವರ ಸೇವಾ ವಿವರ.
ಕಳೆದ 35 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಗೋಪಾಲಕೃಷ್ಣ ಹೆಗಡೆಯವರು ತಮ್ಮ ಮಾನವೀಯ ಸೇವಾ ಕಾರ್ಯದಿಂದ , ಉತ್ತಮ ಅಧಿಕಾರಿಯಾಗಿ ತಮ್ಮ ಸೇವಾ ಅವಧಿಯಲ್ಲಿ 15 ವರ್ಷ ರಾಜ್ಯದ ವಿವಿದೆಡೆ ಹಾಗೂ 20 ವರ್ಷಗಳನ್ನು ಉತ್ತರಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ವಲಯ ಅರಣ್ಯಾಧಿಕಾರಿಯಾಗಿ ಸಹಾಯಕ ಅರಣ್ಯಾಧಿಕಾರಿಯಾಗಿ, ಉಪ ಅರಣ್ಯಾಧಿಕಾರಿಯಾಗಿ ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸಿದ್ದಾರೆ.ತಟ್ಟಿಹಳ್ಳ,ಮೂಡಬಿದ್ರೆ,ಮುಂಡರಗಿ ವಲಯ, ಕ್ಯಾದಗಿ ವಲಯ ಶಿವಮೊಗ್ಗಾದಲ್ಲಿ ಮೊಬೈಲ್ ಸ್ಕ್ವಾಡ್ , ಕುಮಟಾ ಕೆಸಿಡಿಸಿ ಬನವಾಸಿ ವಲಯ, ಸಾಗರ , ಮಂಚಿಕೇರಿ,ಯಲ್ಲಾಪುರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಸಾಮಾಜಿಕ ಉಪವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ.

ಅಭಿನಂದನೆ ಸ್ವೀಕರಿಸಿದ ಗೋಪಾಲಕೃಷ್ಣ ಹೆಗಡೆ ಮಾತನಾಡಿ, ಸಿದ್ಧಾಪುರದ ಕೃಷಿ ಕುಟುಂಬದಿಂದ ಬಂದ ತಾವು ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಗ್ಗೆ ಹಾಗೂ ಬಾಲ್ಯದಿಂದಲೂ ತಮಗೆ ಯಕ್ಷಗಾನದ ಬಗ್ಗೆ ಇದ್ದ ಆಸಕ್ತಿಯನ್ನು ವಿವರಿಸಿದರು.
ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಎಚ್ಚರಿಕೆಯಿಂದ, ಸುರಕ್ಷತಾ ಮುನ್ನೆಚ್ಚರಿಕೆಯಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದ ಅವರು, ಜನರ ಸಹಭಾಗಿತ್ವದಲ್ಲಿ, ಸಿಬ್ಬಂದಿಗಳ ಸಹಕಾರದಿಂದ ಸುಗಮವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಅದರಲ್ಲೂ ಯಲ್ಲಾಪುರ ತಾಲೂಕಿನ ಜನರ ಸಹಕಾರ ಮರೆಯಲು ಸಾಧ್ಯವಿಲ್ಲ ಎಂದರು

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

  • ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
    ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಪಡಿತರ ಚೀಟಿದಾರರಿಗೆ ಹಾಗೂ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರಿಗೆ ತಿಳಿಸುವುದೆನೆಂದರೆ 5,69,044 ಪಡಿತರ ಚೀಟಿ ಸದಸ್ಯರು ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿರುತ್ತಾರೆ. ಇದೀಗ ಅಂತಹ ಸದಸ್ಯರು ತಮ್ಮ ಇ-ಕೆವೈಸಿಯನ್ನು ಪುನಃ ಮಾಡಿಸಿಕೊಳ್ಳಬೇಕಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳಲು ಅಕ್ಟೋಬರ್ 20 ಕೊನೆಯ ದಿನವಾಗಿದೆ. ಇ-ಕೆವೈಸಿ ಬಾಕಿ ಇರುವ ಸದಸ್ಯರ ಪಟ್ಟಿಯನ್ನು ಈಗಾಗಲೇ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ನೀಡಲಾಗಿದೆ. ಆದ್ದರಿಂದ ಪಡಿತರ ಚೀಟಿದಾರರು ತಮ್ಮ ಹೆಸರು… Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
  • ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
    ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡ ಅರ್ಜಿಗಳ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿದರು.ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡಿದ್ದ ಅರ್ಜಿಗಳ ಕುರಿತಂತೆ ಸಾರ್ವಜನಿಕರಿಗೆ ಅರ್ಜಿಯ ಕುರಿತು ಕೈಗೊಂಡಿರುವ ಕ್ರಮಗಳ ಕುರಿತಂತೆ ತಪ್ಪದೇ ಹಿಂಬರಹ ನೀಡಬೇಕು, ಅರ್ಜಿಗಳ ಕುರಿತಂತೆ ಸೌಲಭ್ಯಗಳನ್ನು ಒದಗಿಸಿದ್ದಲ್ಲಿ ಈ ಬಗ್ಗೆ ಮುಂದಿನ ಪ್ರಜಾಸೇವೆ ಸಭೆಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಬೇಕು ಎಂದರು.… Read more: ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
  • ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
    ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು ಕದ್ದೊಯ್ದಿದ್ದಾರೆ. ಅರಣ್ಯ ಇಲಾಖೆಯವರು ಈ ಕುರಿತು ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದ್ದು, ಅಂದಾಜು 44 ಕೆಜಿ ಗಂಧದ ಮರದ ಬುಡಚಿ ಹಾಗೂ 85 ಕೆಜಿ ತಿರುಳಿರದ, ಹಸಿ ಸಿಪ್ಪೆ ಸಹಿತ ಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಗಂದಧ ಮರ ಕಡಿದ ಆರೋಪಿಗಳು ಯಾರು ಎಂದು ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಪಟ್ಟಣ ವ್ಯಾಪ್ತಿಯಲ್ಲಿಯೇ ಇಂತಹ… Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
  • ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
    ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ, ಶಂಕರ, ಸೂರಜ್, ಕಿರಣ, ನಾಗರಾಜ, ಚಂದ್ರು, ಪವನ್ ಎಂಬುವವರ ವಿರುದ್ಧ ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇವರೆಲ್ಲರೂ ಕೂಲಿ, ಗೌಂಡಿ, ಸೆಂಟ್ರಿಂಗ್ ಕೆಲಸ ನಿರ್ವಹಿಸುವವರಾಗಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳಿಂದ 3400 ರೂ ನಗದುಹಣ ಹಾಗೂ ಜೂಜಾಟದ ಪರಿಕರಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ. =================
  • ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
    ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ ನರ್ಸರಿ ಎದುರು ಈ ಅಪಘಾತ ಸಂಭವಿಸಿತ್ತು. ಆರೋಪಿ ಕ್ರೂಸರ್ ವಾಹನದ ಚಾಲಕ ಮುಂಡಗೋಡ ತಾಲೂಕಿನ ಅರಿಶಿನಗೇರಿಯ ಅಭಿಷೇಕ ಸಹದೇವ ಹರಸಂಬಿ ಎಂಬಾತ ತನ್ನ ವಾಹನವನ್ನು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಅತೀವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದು, ಲಾರಿಯೊಂದನ್ನು ಓವರ್ ಟೇಕ್ ಮಾಡಿ, ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಅಂಕೋಲಾ ತಾಲೂಕಿನ ಕಮ್ಮಾಣಿಯ ಕೂಲಿ ಕೆಲಸದ… Read more: ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
  • ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
    ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗುತ್ತಿದ್ದು ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 5 ಡಿ.ಎಸ್.ಪಿ, 22 ಪೊಲೀಸ್ ನಿರೀಕ್ಷಕರು, 72 ಪೊಲೀಸ್ ಸಬ್ ಇನ್ಸ್ಪೆಕ್ಟರ್‌ಗಳು, , 125 ಎ.ಎಸ್.ಐ., 1,020 ಪೊಲೀಸ್ ಕಾನ್ಸ್ಟೆಬಲ್‍ಗಳು ಹಾಗೂ 400 ಹೋಮ್‍ಗಾರ್ಡ್, ಸೇರಿದಂತೆ ಅಧಿಕಾರಿ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದರೊಂದಿಗೆ 5 ಕೆ.ಎಸ್.ಆರ್.ಪಿ.… Read more: ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading