5-6-2022. ರವಿವಾರ.
E-YELLAPUR.COM NEWS ಯಲ್ಲಾಪುರ.
ಮನುಕುಲದ ಉತ್ತಮ ಭವಿಷ್ಯಕ್ಕಾಗಿ ಹಾಗೂ ಎಲ್ಲರ ಒಳಿತಿಗಾಗಿ ನಾವೆಲ್ಲರೂ ಪರಿಸರವನ್ನು ರಕ್ಷಿಸಬೇಕು. ಗಿಡಗಳನ್ನು ನೆಡುವ ಮೂಲಕ ಅರಣ್ಯವನ್ನು ಬೆಳೆಸಬೇಕು ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ಹೇಳಿದರು.
ADVT
ಯಲ್ಲಾಪುರ ಪಟ್ಟಣದ ಎಪಿಎಂಸಿ ಸಮೀಪದ ಸಸ್ಯೋದ್ಯಾನದಲ್ಲಿ ರವಿವಾರ ನಡೆದ ವಿಶ್ವಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತೋತ್ಸವ ಕಾರ್ಯಕ್ರಮಕ್ಕೆ ವೃಕ್ಷಾರೋಪಣ ಹಾಗೂ ಬೀಜ ಬಿತ್ತುವ ಮೂಲಕ ಚಾಲನೆ ನೀಡಿದ ಅವರು ಮಾತನಾಡಿ, ಅರಣ್ಯವನ್ನು ಸಂರಕ್ಷಿಸಲು ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು.
ADVT
ಅಮೂಲ್ಯವಾದ ಅರಣ್ಯವನ್ನು, ವನ್ಯ ಸಂಪತ್ತನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ವರ್ಷ ಒಂದು ವಾರಗಳ ಕಾಲ ಬಿತ್ತೋತ್ಸವ ಕಾರ್ಯಕ್ರಮವನ್ನು ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ADVT
ವಿಶೇಷವಾಗಿ ಸ್ಥಳೀಯವಾಗಿ ಲಭ್ಯವಿರುವ ವಿವಿಧ ಜಾತಿಯ ಬೀಜಗಳನ್ನು ಬಿತ್ತುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಜೂ.12ರವರೆಗೂ ಈ ಕಾರ್ಯ ಮುಂದುವರಿಯಲಿದೆ. ಯಲ್ಲಾಪುರ ಉಪವಿಭಾಗದ ಎಲ್ಲ ವಲಯಗಳಲ್ಲಿಯೂ ಸ್ಥಳೀಯರ ಸಹಕಾರ, ನಾನಾ ಸಂಘಟನೆಗಳ ಸಹಯೋಗದೊಂದಿಗೆ ಬೀಜ ಬಿತ್ತನೆ ಕಾರ್ಯವನ್ನು ಕೈಗೊಳ್ಳಲಾಗುವುದು.
ADVT
ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅರಣ್ಯ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಬಿತ್ತೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ADVT
ಇದೇ ಸಂದರ್ಭದಲ್ಲಿ ಸಸ್ಯೋದ್ಯಾನದಲ್ಲಿ ಸ್ಥಳೀಯವಾಗಿ ಲಭ್ಯ ಇರುವ ವಿವಿಧ ಬೀಜಗಳನ್ನು ಬಿತ್ತಲಾಯಿತು. ಈ ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹಿಮವತಿ ಭಟ್, ಆನಂದ,
ADVT
ಯಲ್ಲಾಪುರ ವಲಯ ಅರಣ್ಯಾಧಿಕಾರಿ ಬಾಲಸುಬ್ರಹ್ಮಣ್ಯ ಹಾಗೂ ಇಲಾಖೆಯ ಸಿಬ್ಬಂದಿಗಳು, ಶಾಲಾ ಮಕ್ಕಳು, ಸಾರ್ವಜನಿಕರು, ವಿವಿಧ ಗ್ರಾಮಾಭಿವೃದ್ಧಿ ಸಮಿತಿಯ ಪ್ರಮುಖರು,
ADVT
ನಾನಾ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸ್ಕೌಟ್ಸ್ ಮತ್ತು ಗೌಡ್ಸ್ ತಂಡದವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಇದ್ದರು.
ADVT
ADVT
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related