12-6-2022. ರವಿವಾರ.

E-YELLAPUR.COM NEWS ಯಲ್ಲಾಪುರ.

ಯಲ್ಲಾಪುರ ತಾಲೂಕಿನ ಕಿರವತ್ತಿಯ ಮರಮಟ್ಟು ಸಂಗ್ರಹಾಲಯ ಜಂಗ್ಲಿ ಡಿಪೋದಲ್ಲಿ ರವಿವಾರ ಬಿತ್ತೋತ್ಸವ ಹಾಗೂ ವನಮಹೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆದಾರರು, ಕಾರ್ಮಿಕರು, ಗ್ರಾಮಸ್ಥರು, ಸಾರ್ವಜನಿಕರು ಇದ್ದರು.

ADVT

ಆರೋಗ್ಯಕರ ಜೀವನ ಹಾಗೂ ಸ್ವಸ್ಥ ಸಮಾಜಕ್ಕಾಗಿ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ ; ಡಿಡಿಪಿಐ ಪಿ.ಬಸವರಾಜ.

ಆರೋಗ್ಯಕರ ಜೀವನ ಹಾಗೂ ಸ್ವಸ್ಥ ಸಮಾಜಕ್ಕಾಗಿ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ. ನಾನಾ ಕಾರಣಗಳಿಂದಾಗಿ ಆಗುತ್ತಿರುವ ಅರಣ್ಯ ನಾಶವನ್ನು ತಡೆಗಟ್ಟಿ ಅರಣ್ಯ, ಪರಿಸರ, ನೈಸರ್ಗಿಕ ಸಂಪತ್ತುಗಳನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿರಸಿ ಶೈಕ್ಷಣಿಕ ಜಿಲ್ಲಾ ಉಪನಿರ್ದೇಶಕ ಪಿ.ಬಸವರಾಜ ಹೇಳಿದರು.

ADVT

ಪಟ್ಟಣದ ಮಾದರಿ ಶಾಲೆಯಲ್ಲಿ ಅರಣ್ಯ ಇಲಾಖೆ, ಸ್ಕೌಟ್ ಮತ್ತು ಗೈಡ್ಸ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆದ ಪರಿಸರ ದಿನಾಚರಣೆ ಹಾಗೂ ಬಿತ್ತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ADVT

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಮಾತನಾಡಿ, ಅರಣ್ಯ,ಪರಿಸರ ಉತ್ತಮವಾಗಿದ್ದರೆ ಮಾತ್ರ ಜನರು ಸುಭಿಕ್ಷದಿಂದ ಇರಲು ಸಾಧ್ಯ. ಪರಿಸರ,ಮರಗಿಡಗಳೊಂದಿಗೆ ನಿತ್ಯ ಒಡನಾಟದಲ್ಲಿ ಇರುವಂತೆ ಮಕ್ಕಳನ್ನು ಪ್ರೇರೇಪಿಸಬೇಕು.

ADVT

ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಎಸಿಎಫ್ ಆನಂದ, ಸ್ಕೌಟ್ ಮತ್ತು ಗೈಡ್ಸ್ ಸಂಘಟನೆಯ ತಾಲೂಕಾ ಅಧ್ಯಕ್ಷ ನಂದನ ಬಾಳಗಿ, ಜಿಲ್ಲಾ ಸಂಘಟಕ ವೀರೇಶ ಮಾದರ್, ಪ್ರಮುಖರಾದ ಎ.ಎ.ಶೇಕ್,

ADVT

ನಾಗರಾಜ ನಾಯ್ಕ, ವಿನೋದ ನಾಯಕ, ಜಗದೀಶ ನಾಯ್ಕರ್ ಮುಂತಾದವರು ಇದ್ದರು.
ಸ್ಕೌಟ್ ಮತ್ತು ಗೈಡ್ಸ್ ತಾಲೂಕಾ ಕಾರ್ಯದರ್ಶಿ ಸುಧಾಕರ ನಾಯಕ ಸ್ವಾಗತಿಸಿ, ನಿರ್ವಹಿಸಿದರು. ಶಿಕ್ಷಕ ಚಂದ್ರಶೇಖರ ವಂದಿಸಿದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading