23-6-2022. ಗುರುವಾರ.

E-YELLAPUR.COM NEWS ಯಲ್ಲಾಪುರ.

ಯಲ್ಲಾಪುರ ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಾಲಯದಲ್ಲಿ ನಡೆದ ಅಷ್ಟಬಂಧ-ಪ್ರತಿಷ್ಠಾ ಮಹೋತ್ಸವವು ಗುರುವಾರ ಸಂಪನ್ನಗೊಂಡಿತು. ಗುರುವಾರ ಬೆಳಿಗ್ಗೆ ಪುಣ್ಯಾಹ, ನವಗ್ರಹ ಹವನ, ಮೃತ್ಯುಂಜಯ ಹವನ, ಅಷ್ಟಬಂಧ ಹೋಮ, ಪ್ರಾಯಶ್ಚಿತ್ತ ಹೋಮ, ಶ್ರೀಸೂಕ್ತ ಹೋಮ, ಪುರುಷಸೂಕ್ತ ಹೋಮ,

ಪೂರ್ಣಾಹುತಿ, ಪೂರ್ಣಕಲಾ ಸಾನ್ನಿಧ್ಯ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಸಾರಿಗೆ ಅಧಿಕಾರಿಗಳ ಸಭೆ ನಡೆಸಿದ ವಿ.ಎಸ್.ಪಾಟೀಲ್.

ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ್ ಅವರು ಯಲ್ಲಾಪುರ ಪಟ್ಟಣದ ಸಾರಿಗೆ ಡಿಪೋದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಕುಂದು-ಕೊರತೆಗಳನ್ನು ವಿಚಾರಿಸಿ, ನಾನಾ ಸಲಹೆ-ಸೂಚನೆಗಳನ್ನು ನೀಡಿದರು.
ತಾಲೂಕಾ ಬಿಜೆಪಿ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ್, ಡಿಪೋ ವ್ಯವಸ್ಥಾಪಕ ಸಂತೋಷ ವೆರ್ಣೇಕರ್ ಹಾಗೂ ಅಧಿಕಾರಿಗಳು, ಪ್ರಮುಖರಾದ ಗಣಪತಿ ಬೋಳಗುಡ್ಡೆ, ವೆಂಕಟ್ರಮಣ ವೈದ್ಯ ಮುಂತಾದವರು ಇದ್ದರು. ಇದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading