1-7-2022. ಶುಕ್ರವಾರ.

E-YELLAPUR.COM NEWS ಯಲ್ಲಾಪುರ.

ಯಲ್ಲಾಪುರ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರಿಗೆ 2022 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಕಳೆದ ಸಾಲಿನಲ್ಲಿ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ ಶ್ರೀಕೃಷ್ಣ ಕಾಮ್ಕರ್ ಅವರ ಉತ್ತಮ ಕರ್ತವ್ಯ ನಿರ್ವಹಣೆ ಹಾಗೂ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರನ್ನು ರಾಜ್ಯ ಮಟ್ಟದ ಈ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ರಾಜ್ಯದಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರಶಸ್ತಿ ಇದಾಗಿದ್ದು, ಈಬಾರಿ ಒಟ್ಟೂ 30 ಸರ್ಕಾರಿ ನೌಕರರಿಗೆ ಈ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ಪ್ರಶಸ್ತಿ ಪುರಸ್ಕೃತರನ್ನು 50 ಸಾವಿರ ರೂ ಮೊತ್ತ, ಪ್ರಶಸ್ತಿ ಫಲಕ, ಹಾರ,ಶಾಲನ್ನು ನೀಡಿ ಗೌರವಿಸಲಾಗುವುದು. ತಹಸೀಲ್ದಾರ್ ಶ್ರಿಕೃಷ್ಣ ಕಾಮ್ಕರ್ ಅವರು ಉತ್ತಮವಾಗಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಿದ ಹಿನ್ನೆಲೆಯಲ್ಲಿ ಈ ಹಿಂದೆ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading