
4-7-2022. ಸೋಮವಾರ.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಕೇಂದ್ರೀಕರಣ ಯೋಜನಾ ಸಮಿತಿಯ ಉಪಾಧ್ಯಕ್ಷರು ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷರೂ ಆದ ಪ್ರಮೋದ ಹೆಗಡೆಯವರು ಎಪ್ಪತ್ತು ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಅವರಿಗೆ ಅಭಿನಂದನಾ ಸಮಾರಂಭವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಸಿದ್ದಾಪುರದ ವಿಜಯ ಹೆಗಡೆ ದೊಡ್ಮನೆ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರುವ ಡಿಸೆಂಬರ್ ತಿಂಗಳಿನಲ್ಲಿ ಯಲ್ಲಾಪುರದಲ್ಲಿ ಈ ಸಮಾರಂಭ ನಡೆಯಲಿದೆ. ಅಭಿನಂದನಾ ಸಮಾರಂಭದಲ್ಲಿ ಪ್ರಮೋದ ಹೆಗಡೆಯವರ ಜೀವನ,ಸಾಧನೆಗಳ ಕುರಿತು ಅಭಿನಂದನಾ ಗೃಂಥ ಪ್ರಕಟಗೊಳ್ಳಲಿದೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಎಸ್.ಪಿ.ಶೆಟ್ಟಿ, ಕಾಶ್ಯಪ ಪರ್ಣಕುಟಿ, ಪಿ.ಜಿ.ಹೆಗಡೆ, ಡಿ.ಶಂಕರ ಭಟ್ಟ, ಸಿ.ಜಿ.ಹೆಗಡೆ ಮುಂತಾದವರು ಇದ್ದರು.


ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/





