ADVT

18-7-2022. ಸೋಮವಾರ.

E-YELLAPUR DIGITAL NEWS.

ನಾನು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದೇನೆ ಎಂಬ ಕುರಿತು ಹರಿದಾಡುತ್ತಿರುವ ಸುದ್ದಿ ಕೇವಲ ವದಂತಿಯಾಗಿದೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಂತಹ ಯಾವುದೇ ತೀರ್ಮಾನವನ್ನೂ ಕೈಗೊಂಡಿಲ್ಲ ಎಂದು ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ್ ಹೇಳಿದ್ದಾರೆ. ಈ ಕುರಿತು ಅವರು ಯಲ್ಲಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರಲು ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್‍ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇದನ್ನು ಬಿಂಬಿಸುವಂತೆ ಫೋಟೋ ಎಡಿಟ್ ಮಾಡಿ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಇದು ಶುದ್ಧ ಸುಳ್ಳು.

ನಾನು ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಸೇರುವ ಇರಾದೆಯೂ ಇಲ್ಲ. ಈ ಹಿಂದೆ ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಸ್ಫರ್ಧಿಸಿ ಸೋತಿದ್ದೇನೆ. ಪ್ರಸ್ತುತ ಸಾರಿಗೆ ನಿಗಮದ ಜವಾಬ್ದಾರಿಯನ್ನೂ ಪಕ್ಷ ನೀಡಿದೆ. ಏನಿದ್ದರೂ ಬಿಜೆಪಿಯಲ್ಲಿ ಇದ್ದುಕೊಂಡೇ ಸ್ವಾಭಾವಿಕವಾಗಿ ಮುಂದಿನ ಚುನಾವಣೆಗೆ ಪಕ್ಷದ ಟಿಕೇಟ್‍ಗಾಗಿ ಪ್ರಯತ್ನಿಸುತ್ತೇನೆಯೇ ವಿನಃ ಕಾಂಗ್ರೆಸ್ ಸೇರುವುದಿಲ್ಲ ಎಂದು ತಿಳಿಸಿದ್ದಾರೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading