25-7-2022. ಸೋಮವಾರ.

ಭಾರತದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಯಲ್ಲಾಪುರ ಬಿಜೆಪಿ ಮಂಡಳದ ವತಿಯಿಂದ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ವಿಜಯೋತ್ಸವ ನಡೆಯಿತು.

SEE VIDEO

ಸಚಿವ ಶಿವರಾಮ ಹೆಬ್ಬಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯು ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿರುವುದು ಆದಿವಾಸಿಗಳಿಗೆ ಹಾಗೂ ಮಹಿಳೆಯರಿಗೆ ಅತ್ಯಂತ ಗೌರವದ ಸಂಗತಿಯಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ಭಾರತವು ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಮುಖರಾದ ಶ್ರೀಕಾಂತ ಶೆಟ್ಟಿ, ವಿಜಯ ಮಿರಾಶಿ, ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ತಳವಾರ, ಪ.ಪಂ ಅಧ್ಯಕ್ಷೆ ಸುನಂದಾ ದಾಸ್ ಹಾಗೂ ಕಾರ್ಯಕರ್ತರು ಇದ್ದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

ಪ್ರಮುಖ ದೃಶ್ಯಾವಳಿಗಳನ್ನು ವೀಕ್ಷಿಸಲು e-ಯಲ್ಲಾಪುರ ಡಿಜಿಟಲ್ ನ್ಯೂಸ್ ಯೂಟ್ಯೂಬ್ ಚಾನೆಲ್ SUBSCRIBE ಮಾಡಿ.

E-YELLAPUR DIGITAL NEWS YOUTUBE LINK

https://youtube.com/channel/UCl9HLpwN7rGV0dyzYruwkFw

ವಿದ್ಯುತ್ ಉತ್ಸವ

ಇಂಧನ ಇಲಾಖೆಯ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಉಜ್ವಲ ಭಾರತ ಉಜ್ವಲ ಭವಿಷ್ಯ ವಿದ್ಯುತ್ ಉತ್ಸವ ಕಾರ್ಯಕ್ರಮವು ಸೋಮವಾರ ಪಟ್ಟಣದ ಏಪಿಎಂಸಿ ಆವಾರದ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಒಟ್ಟೂ ವಿದ್ಯುತ್ ಉತ್ಪಾದನೆಯಲ್ಲಿ ಶೇಕಡಾ 22 ಪ್ರತಿಶತ ಪಾಲು ನಮ್ಮ ಉತ್ತರ ಕನ್ನಡ ಜಿಲ್ಲೆಯದ್ದಾಗಿದೆ. ರಾಜ್ಯದ ಜನತೆಗೆ ಬೆಳಕನ್ನು ಒದಗಿಸುವುದಕ್ಕೆ ಜಿಲ್ಲೆಯ ಜನತೆಯು ಅನೇಕ ತ್ಯಾಗವನ್ನು ಮಾಡಿದ್ದಾರೆ.

ಇಂಧನ ಇಲಾಖೆಯ ಮಹತ್ತರ ಬೆಳಕು ಯೋಜನೆ ಅಡಿಯಲ್ಲಿ 9300 ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದ್ದು ಡಿಸೆಂಬರ್ ತಿಂಗಳ ಅಂತ್ಯದ ವೇಳೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುವುದು ಎಂದರು.

SEE VIDEO

ಸಭಾ ಕಾರ್ಯಕ್ರಮದ ನಂತರ ಕಿರುನಾಟಕ ಹಾಗೂ ಯಕ್ಷನೃತ್ಯ ಪ್ರದರ್ಶನ ನಡೆಯಿತು.

ಸತೀಶ ಕಟ್ಟಿಗೆ ನಿಧನ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸತೀಶ ಕಟ್ಟಿಗೆ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಅಲ್ಪ ಕಾಲದ ಅನಾರೋಗ್ಯದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ, ನಿಷ್ಠಾವಂತ ಕಾರ್ಯಕರ್ತರಾಗಿ, ಹಿಂದೂಪರ ಸಂಘಟನೆಗಳ ಪ್ರಮುಖ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಸಚಿವ ಶಿವರಾಮ ಹೆಬ್ಬಾರ್, ತಾಲೂಕಾ ಬಿಜೆಪಿ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ್ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬಸ್ ನಿಲ್ಧಾಣದಲ್ಲಿ ಪುಸ್ತಕ ಮಳಿಗೆ ಸ್ಥಾಪನೆಗೆ ಆಗ್ರಹ.

ಯಲ್ಲಾಪುರ ಪಟ್ಟಣ ಬಸ್ ನಿಲ್ಧಾಣದಲ್ಲಿ ಕೂಡಲೇ ಪುಸ್ತಕ ಮಳಿಗೆ ಸ್ಥಾಪನೆ ಮಾಡಬೇಕು. ಪುಸ್ತಕ ಮಳಿಗೆ ಸ್ಥಾಪಿಸಲು ಹಿಂದೇಟು ಹಾಕುತ್ತಿರುವದರ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಗುವದು ಎಂದು ಮಾತೃಭೂಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀರಂಗ ಕಟ್ಟಿ ಎಚ್ಚರಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಸ್ತಕ ಮಳಿಗೆ ಸ್ಥಾಪನೆಗೆ ವಾಣಿಜ್ಯೇತರ ದರವನ್ನು ನಿಗದಿಪಡಿಸಿ ತಕ್ಷಣ ಟೆಂಡರ್ ಕರೆಯಬೇಕೆಂದು ಅವರು ಆಗ್ರಹಿಸಿದ್ದಾರೆ. ಪ.ಪಂ.ಸದಸ್ಯ ಸೋಮೇಶ್ವರ ನಾಯ್ಕ, ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹಿರೇಮಠ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/59385

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading