28-7-2022. ಗುರುವಾರ.

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಹತ್ಯೆಯನ್ನು ಖಂಡಿಸಿ ಹಾಗೂ ಇಂತಹ ಘಟನೆಗಳಲ್ಲಿ ಬಿಜೆಪಿ ಪಕ್ಷದ ನಾಯಕರ ನಡೆಯ ಕುರಿತು ಅಸಮಾಧಾನಗೊಂಡು ರಾಜ್ಯದ ವಿವಿದೆಡೆ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಯಲ್ಲಾಪುರ ಬಿಜೆಪಿ ಯುವ ಮೋರ್ಚಾದ ಪ್ರಮುಖರು ಗುರುವಾರ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ತಾಲೂಕಾ ಯುವ ಮೋರ್ಚಾದ ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸೋಮೇಶ್ವರ ನಾಯ್ಕ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ರಘುಪತಿ ಹೆಗಡೆ ಮುಂತಾದವರು ರಾಜೀನಾಮೆ ನೀಡಿದ್ದಾರೆ. ಪಕ್ಷದ ಜವಾಬ್ದಾರಿ ಹೊಂದಿರುವ ಇನ್ನಷ್ಟು ಪದಾಧಿಕಾರಿಗಳು ಸದ್ಯದಲ್ಲಿಯೇ ರಾಜೀನಾಮೆ ನೀಡುವ ಸಂಭವ ಇದೆ.

ಇಂತಹ ವಿಷಯಗಳಲ್ಲಿ ಸರ್ಕಾರದ ಮೃದು ಧೋರಣೆಯನ್ನು ಖಂಡಿಸಿ, ಬಿಜೆಪಿ ಹಿರಿಯ ಮುಖಂಡ ರಾಮು ನಾಯ್ಕ ಸಹ ಪಕ್ಷದ ಜಿಲ್ಲಾ ಸಮಿತಿಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಹೆಗಡೆ ಸಹ ಗುರುವಾರ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಗುರುವಾರ e-yellapur digital news ಮಾಧ್ಯಮದಲ್ಲಿ ಪದಾಧಿಕಾರಿಗಳ ರಾಜೀನಾಮೆಗೆ ಹೆಚ್ಚಿದ ಒತ್ತಡ, ಬಿಜೆಪಿ ಸ್ಥಳೀಯ ನಾಯಕರಲ್ಲಿ ಶುರುವಾಯ್ತು ತಳಮಳ ಎಂಬ ವಿಶೇಷ ವರದಿಯನ್ನು ಪ್ರಕಟಿಸಲಾಗಿತ್ತು.
ಈ ವರದಿ ಓದಲು ಈ ಲಿಂಕ್ ಒತ್ತಿ.

ಹಿಂದುತ್ವದ ಹೆಸರನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಕಾರ್ಯಕರ್ತರನ್ನು ರಕ್ಷಿಸುವ ಕೆಲಸ ಮಾಡಬೇಕು. ಈ ವಿಷಯವನ್ನು ಬರೀ ಭಾಷಣಕ್ಕೆ ಸೀಮಿತಗೊಳಿಸಬಾರದು. ಇಂತಹ ಘಟನೆಗಳನ್ನು ಖಂಡಿಸಿ ಪದಾಧಿಕಾರಿಗಳು ರಾಜೀನಾಮೆ ನೀಡುವುದೇ ಸೂಕ್ತವಾಗಿದೆ ; ಗಣಪತಿ ಗಾಂವ್ಕಾರ್ ವಾಗಳ್ಳಿ. ಹಿಂದೂ ಸಂಘಟನೆಗಳ ಕಾರ್ಯಕರ್ತ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/59385

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading