
1-8-2022. ಸೋಮವಾರ.


ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಪ್ರಯುಕ್ತ ವಿವಿಧ ಇಲಾಖೆಗಳ ಆಶ್ರಯದಲ್ಲಿ ಯಲ್ಲಾಪುರ ಪಟ್ಟಣದ ತಾಲೂಕಾ ಪಂಚಾಯತಿ ಆವಾರದಲ್ಲಿ ಸೋಮವಾರ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ನಡೆಯಿತು.
VIDEO
ಶಿಗ್ಗಾವಿಯ ವಿರಕ್ತಮಠದ ಗದಿಗೇಶ್ವರ ಸ್ವಾಮೀಜಿಯವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸುದ್ದಿಯ ಹಾಗೂ ಪ್ರಮುಖ ಸುದ್ದಿಗಳ ವಿಡಿಯೋ ವೀಕ್ಷಿಸಲು ಕೆಳಗಿನ E-YELLAPUR DIGITAL NEWS YOTUBE ಲಿಂಕ್ ಅನ್ನು ಕ್ಲಿಕ್ ಮಾಡಿ. SUBSCRIBE ಮಾಡಿ.
https://youtube.com/channel/UCl9HLpwN7rGV0dyzYruwkFw
ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಗ್ರೇಡ್-2 ತಹಸೀಲ್ದಾರ್ ಸಿ.ಜಿ.ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಮುಂತಾದವರು ಇದ್ದರು. ವ್ಯಸನಮುಕ್ತ ದಿನಾಚರಣೆಯ ನಿಮಿತ್ತ ಜಾಗ್ರತಿ ಜಾಥಾ ನಡೆಯಿತು.

ಮತದಾರರ ಗುರುತಿನ ಚೀಟಿಗೆ ಆಧಾರ ಸಂಖ್ಯೆ ಜೋಡಣೆ ಕಾರ್ಯಕ್ರಮ.

ಮತದಾರರ ಗುರುತಿನ ಚೀಟಿಗೆ ಆಧಾರ ಸಂಖ್ಯೆ ಜೋಡಣೆ ಕಾರ್ಯಕ್ರಮವು ಯಲ್ಲಾಪುರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆಯಿತು. ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಗ್ರೇಡ್-2 ತಹಸೀಲ್ದಾರ್ ಸಿ.ಜಿ.ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಹಾಗೂ ಪಟ್ಟಣ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳು ಇದ್ದರು.






