3-8-2022. ಬುಧವಾರ.

ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯು ಯಲ್ಲಾಪುರ. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆಯಿತು. ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು. ಸ್ವಾತಂತ್ರ್ಯೋತ್ಸವದ ನಿಮಿತ್ತ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ, ಗಾಂಧಿಕುಟೀರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಈಬಾರಿಯ ಸ್ವಾತಂತ್ರ್ಯೋತ್ವವನ್ನು ಅದ್ದೂರಿಯಾಗಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂಗನಬಸಯ್ಯ, ಗ್ರೇಡ್-2 ತಹಸೀಲ್ದಾರ್ ಸಿ.ಜಿ.ನಾಯ್ಕ, ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ರಾಮು ನಾಯ್ಕ ಮುಂತಾದವರು ಇದ್ದರು.

ಸುದ್ದಿಯ ಹಾಗೂ ಪ್ರಮುಖ ಸುದ್ದಿಗಳ ವಿಡಿಯೋ ವೀಕ್ಷಿಸಲು ಕೆಳಗಿನ E-YELLAPUR DIGITAL NEWS YOTUBE ಲಿಂಕ್ ಅನ್ನು ಕ್ಲಿಕ್ ಮಾಡಿ. SUBSCRIBE ಮಾಡಿ.

https://youtube.com/channel/UCl9HLpwN7rGV0dyzYruwkFw

ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಜೀವ ವೈವಿಧ್ಯತೆ ಅರಿವು ಕಾರ್ಯಾಗಾರ.

ಯಲ್ಲಾಪುರ ಪಟ್ಟಣದ ಹೊಲೀ ರೋಜರಿ ಪ್ರೌಢ ಶಾಲೆಯಲ್ಲಿ ಬುಧವಾರ ಜೀವ ವೈವಿಧ್ಯತೆಯ ಅರಿವು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಉದ್ಘಾಟಿಸಿ ಮಾತನಾಡಿ, ಜೀವ ಸಂಕುಲವನ್ನು ಕಾಪಾಡಿಕೊಂಡು ಬರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜೀವವೈವಿಧ್ಯತೆಗಳ ರಕ್ಷಣೆಯ ಕುರಿತು ಜಾಗ್ರತಿ ಅವಶ್ಯವಾಗಿದೆ ಎಂದರು.

ಕಡಲ ವಿಜ್ಞಾನಿ ಡಾ.ವಿ.ಎನ್.ನಾಯಕ ಅವರು ಜೀವ ವೈವಿಧ್ಯತೆಗಳ ರಕ್ಷಣೆಯ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು. ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ, ತಾಲೂಕಾ ಅಧ್ಯಕ್ಷ ಚಂದ್ರಶೇಖರ ಎಸ್.ಸಿ.ಶಿಕ್ಷಣ ಸಂಯೋಜಕ ಪ್ರಶಾಂತ, ಮುಖ್ಯಾಧ್ಯಾಪಕರಾದ ಫಾ.ರೇಮಂಡ್ ಫರ್ನಾಂಡಿಸ್ ಮುಂತಾದವರು ಇದ್ದರು. ಕಾರ್ಯಾಗಾರದಲ್ಲಿ ತಾಲೂಕಿನ ವಿವಿಧ ಶಾಲೆಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಕ.ರಾ.ವಿ.ಪ.ಸಂಚಾಲಕ ರಾಜಶೇಖರ ಎಂ ನಿರ್ವಹಿಸಿದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://w

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading