23-8-2022. ಮಂಗಳವಾರ.

ಯಲ್ಲಾಪುರ ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಸುತ್ತಮುತ್ತ ಕಳೆದ ಕೆಲ ದಿನಗಳಿಂದ ಹಗಲು ಹೊತ್ತಿನಲ್ಲಿ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಟದ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು,

ಮಂಚಿಕೇರಿ ಅರಣ್ಯ ವಲಯದ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮಸ್ಥರೊಂದಿಗೆ ಸೇರಿ ಕುಂದರಗಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು.

ಚಿರತೆಯನ್ನು ದಟ್ಟ ರಣ್ಯಕ್ಕೆ ಓಡಿಸಲು ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ.ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯವರೊಂದಿಗೆ ತಾ.ಪಂ.ಮಾಜಿ ಸದಸ್ಯ ನಟರಾಜ ಗೌಡರ್ ಇದ್ದರು.

ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw

ಉಮ್ಮಚಗಿ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.

ತಾಲೂಕಿನ ಉಮ್ಮಚಗಿಯ ವಿದ್ಯುತ್ ಉಪವಿದ್ಯುತ್ ಕೇಂದ್ರದಲ್ಲಿ ತುರ್ತು ಮಾರ್ಗ ನಿರ್ವಹಣಾ ಕಾಮಗಾರಿ ಇರುವುದರಿಂದ ಆ.24 ಬುಧವಾರದಂದು ಉಮ್ಮಚಗಿ ವ್ಯಾಪ್ತಿಯ ಮಾವಿನಕಟ್ಟಾ, ಹಿತ್ಲಳ್ಳಿ,ಉಮ್ಮಚಗಿ,ಬಿಳ್ಕಿ ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/59385 join

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading