24-8-2022. ಬುಧವಾರ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್ ಅವರನ್ನು ಈ ಸ್ಥಾನದಿಂದ ಕೈಬಿಡಲಾಗಿದೆ. ಅವರ ನಾಮನಿರ್ದೇಶನವನ್ನು ರದ್ದುಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

ಈ ಕುರಿತು ಬುಧವಾರ ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸದ್ಯದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದೇನೆ. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೇಟ್‍ಗಾಗಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.

ವಿ.ಎಸ್.ಪಾಟೀಲರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತಿಗೆ ಈ ಬೆಳವಣಿಗೆಯು ಇನ್ನಷ್ಟು ಪುಷ್ಟಿ ನೀಡಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಮುಂಡಗೋಡಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಟೀಲರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಾಗೇನಾದರೂ ಕಾಂಗ್ರೆಸ್‍ನಿಂದ ಪಾಟೀಲರಿಗೆ ಟಿಕೇಟ್ ಖಾತ್ರಿಯಾದರೆ ಯಲ್ಲಾಪುರ ಕ್ಷೇತ್ರದ ಚುನಾವಣಾ ಕಣ ರಂಗೇರಲಿದೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/ join ಆಗಿ

ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading