6-9-2022. ಮಂಗಳವಾರ.

ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ಯಲ್ಲಾಪುರ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರಿಗೆ ಮಂಗಳವಾರ ಬೆಂಗಳೂರಿನ ವಿಧಾನಸೌಧದ ಬ್ವಾಂಕ್ವೆಟ್‍ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆಯನ್ನು ಸಲ್ಲಿಸಿದ ನೌಕರರಿಗೆ ಸರ್ಕಾರದಿಂದ ನೀಡುವ ಪ್ರಶಸ್ತಿ ಇದಾಗಿದ್ದು, ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರು ಸಲ್ಲಿಸಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರಥಮ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading