ಯಲ್ಲಾಪುರ ತಾಲೂಕಿನ ಇಡಗುಂದಿಯಲ್ಲಿ ನಡೆದ ವಲಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿಗಳು ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ. ಒಟ್ಟೂ 16 ಸ್ಪರ್ಧೆಗಳ ಪೈಕಿ 11 ಸ್ಪರ್ಧೆಗಳಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದು, ಇನ್ನುಳಿದ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ. ತಾಲೂಕಾ ಮಟ್ಟಕ್ಕೆ ಆಯ್ಕೆಯಾದ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಾಧ್ಯಾಪಕ ಎಮ್ ಕೆ ಭಟ್ಟ ಮತ್ತು ಶಿಕ್ಷಕ ವೃಂದ ಅಭಿನಂದಿಸಿದೆ.
ಪ್ರಸಕ್ತ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಡಿಸಿಎಫ್ ಎಸ್.ಜಿ.ಹೆಗಡೆ ಇದ್ದರು
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸುಧಾಕರ ನಾಯಕ ಅವರನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಸನ್ಮಾನಿಸಿ, ಅಭಿನಂದಿಸಿದರು.