


ವಿಡಿಯೋ ವೀಕ್ಷಣೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
11-9-2022. ರವಿವಾರ.

ಸಾಮಾಜಿಕ, ಸಾಂಸ್ಕೃತಿಕ , ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕ ಕಾರ್ಯಗಳನ್ನು ಮಾಡುವ ಸದುದ್ದೇಶದಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದ ಯಲ್ಲಾಪುರದ ಸುಜ್ಞಾನ ಫೌಂಡೇಶನ್ (ರಿ) ಸಂಘಟನೆಯ ಲೋಗೋವನ್ನು ಶನಿವಾರ ಯಲ್ಲಾಪುರ ಪಟ್ಟಣದ ಸಾಹಿತ್ಯ ಭವನದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಜ್ಞಾನ ಫೌಂಡೇಶನ್ ಸಂಘಟನೆಯು ಪ್ರಾರಂಭಗೊಂಡಿರುವುದು ಸಂತಸ ತಂದಿದೆ. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಇನ್ನಷ್ಟು ಮಹತ್ವದ ಕೊಡುಗೆಗಳನ್ನು ನೀಡುವಂತಾಗಲಿ. ಉತ್ತಮ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.
ಸುಜ್ಞಾನ ಫೌಂಡೇಶನ್ ಅಧ್ಯಕ್ಷ ಜಿ.ಎನ್.ಭಟ್. ತಟ್ಟಿಗದ್ದೆ ಮಾತನಾಡಿ, ಸದುದ್ದೇಶ ಮತ್ತು ಸದ್ವಿನಿಯೋಗ ಹಾಗೂ ಕ್ರಿಯಾಶೀಲ ಕಾರ್ಯಚಟುವಟಿಕೆಗಳನ್ನು ಮಾಡುವ ಉದ್ದೇಶದಿಂದ ಈ ಸಂಘಟನೆಯನ್ನು ಪ್ರಾರಂಭಿಸಲಾಗಿದೆ. ಉತ್ತರಕನ್ನಡ ಜಿಲ್ಲೆ ಹಾಗೂ ಧಾರವಾಡ ಜಿಲ್ಲೆ ಮತ್ತು ಹಾವೇರಿ ಜಿಲ್ಲೆಗಳಿಗೂ ಈ ಸಂಘಟನೆಯ ಕಾರ್ಯಚಟುವಟಿಕೆಯನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ. ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯ ಬಹುಮಾನ ವಿಜೇತರು.



ಸುಜ್ಞಾನ ಫೌಂಡೇಶನ್ ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ ಹಾಗೂ ವಿಶ್ವಸ್ಥ ಮಂಡಳಿಯ ಪ್ರಮುಖರು ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್, ರಂಗಸಹಾದ್ರಿ ಅಧ್ಯಕ್ಷ ಡಿ.ಎನ್.ಗಾಂವ್ಕಾರ್, ಗೌತಮ್ ಜುವೆಲ್ಲರ್ಸ್ ಮಾಲೀಕ ಪ್ರಕಾಶ ಶೇಟ್ ಕ.ಸಾ.ಪ.ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಮುಂತಾದವರು ಇದ್ದರು. ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ವರದಿಗಾರ ಶ್ರೀಧರ ಅಣಲಗಾರ್ ನಿರ್ವಹಿಸಿದರು.
ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯ ಬಹುಮಾನ ವಿಜೇತರು.





ರಂಜಿಸಿದ ಸಂಗೀತ ಸಿಂಚನ.


ಶನಿವಾರ ಯಲ್ಲಾಪುರದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸುವ ಸಮಾರಂಭದಲ್ಲಿ ನಡೆದ ಸಂಗೀತ ಸಿಂಚನ ಕಾರ್ಯಕ್ರಮವು ಪ್ರೇಕ್ಷಕರನ್ನು ರಂಜಿಸಿತು. ಗಾಯಕರಾದ ಶ್ರಿಪಾದ ಭಟ್ಟ ಹಾಗೂ ಪ್ರಶಾಂತ ನಾಯ್ಕ ಅವರು ಭಾವಗೀತೆ, ಭಕ್ತಿಗೀತೆಗಳ ಸಂಗೀತ ಸಿಂಚನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸುಜ್ಞಾನ ಫೌಂಡೇಶನ್ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಹಾಗೂ ಗೌತಮ್ ಜುವೆಲ್ಲರ್ಸ್ ಮಾಲೀಕ ಪ್ರಕಾಶ ಶೇಟ್ ಕಲಾವಿದರನ್ನು ಗೌರವಿಸಿದರು.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/ join ಆಗಿ













