16-9-2022. ಶುಕ್ರವಾರ.

ಈ ಸುದ್ದಿಯ ವಿಡಿಯೋ ದೃಶ್ಯಾವಳಿಯ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ತ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಸೂಚನೆಯಂತೆ ಮೋದಿಯವರ ಜನ್ಮ ದಿನವಾದ ಸೆ.17ರಿಂದ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವಾದ ಅ.2ರವರೆಗೆ ಬಿಜೆಪಿ ಪಕ್ಷದ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಾಲೂಕಾ ಬಿಜೆಪಿ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ್ ತಿಳಿಸಿದರು.

ಅವರು ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಈ ಕುರಿತು ಮಾಹಿತಿ ನೀಡಿ ಮಾತನಾಡಿದ ಅವರು, ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ,ಲಸಿಕಾ ಅಭಿಯಾನ, ಶಾಲಾಮಕ್ಕಳಿಗೆ ಬ್ಯಾಗ್ ವಿತರಣೆ, ಸ್ವಚ್ಛತಾ ಕಾರ್ಯಕ್ರಮ. ವನಮಹೋತ್ಸವ ಕಾರ್ಯಕ್ರಮ, ಫಲಾನುಭವಿಗಳ ಸಮಾವೇಶ, ಕಮಲೋತ್ಸವ, ಮುಂತಾದ ನಾನಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದರು.

ಯುವ ಮುಖಂಡ ವಿವೇಕ ಹೆಬ್ಬಾರ್ ಮಾತನಾಡಿ, ಸೇವಾಪಾಕ್ಷಿಕ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದರು.

ಈ ಸಂದರ್ಭದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಬಿಜೆಪಿ ತಾಲೂಕಾ ಕಾರ್ಯದರ್ಶಿ ಡಾ.ರವಿ ಭಟ್ಟ ಬರಗದ್ದೆ, ಮಾಧ್ಯಮ ಪ್ರಕೋಷ್ಟದ ಪ್ರಮುಖ ಕೆ.ಟಿ.ಹೆಗಡೆ ಇದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ facebook group – https://www.facebook.com/groups/593852164946589/ join ಆಗಿ

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading