


17-9-2022. ಶನಿವಾರ.
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪ್ರಪಾತಕ್ಕೆ ಬಿದ್ದು, ಲಾರಿಯ ಚಾಲಕ ಹಾಗೂ ಕ್ಲೀನರ್ ಮೃತಪಟ್ಟ ಘಟನೆ ಶನಿವಾರ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಈ ಸುದ್ದಿಯ ವೀಡಿಯೋ ದೃಶ್ಯಾವಳಿಯನ್ನು ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಲಾರಿಯು ಟೈಲ್ಸ್ ತುಂಬಿಕೊಂಡು, ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೋಗುತ್ತಿತ್ತು. ಅರಬೈಲ್ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಲಾರಿಯು 100 ಮೀಟರ್ ಕೆಳಗೆ ಪ್ರಪಾತಕ್ಕೆ ಉರುಳಿಬಿದ್ದಿದೆ.


ಘಟನೆಯಲ್ಲಿ ಲಾರಿಯ ಚಾಲಕ ಗುಂಟೂರಿನ ಸೈದಾ ಎಸ್.ಕೆ. ಹಾಗೂ ಕ್ಲೀನರ್ ಶೇಖ ಬುಡಾ ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚೂರುಚೂರಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ facebook group – https://www.facebook.com/groups/593852164946589/ join ಆಗಿ












