

6-10-2022. ಗುರುವಾರ.


ಮುಂಬರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಶಾಂತಿ ಸಭೆ ನಡೆಯಿತು. ಸಿಪಿಐ ಸುರೇಶ ಯಳ್ಳೂರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ಈದ್ ಮಿಲಾದ್ ಹಬ್ಬವನ್ನು ಶಾಂತಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸಬೇಕು. ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಸಭೆಯಲ್ಲಿ ಪಿಎಸ್ಸೈಗಳಾದ ಮಂಜುನಾಥ ಗೌಡರ್, ಅಮೀನ್ ಸಾಬ್ ಅತ್ತಾರ್ ಹಾಗೂ ಮುಸ್ಲಿಂ ಸಮಾಜದ ಮುಖಂಡರು ಇದ್ದರು.
ವಾರದ ಸಂತೆ ಶನಿವಾರ ನಿಗದಿ ; ಸುನಂದಾ ದಾಸ್

ಅ.9 ರವಿವಾರದಂದು ನಡೆಯಬೇಕಿದ್ದ ವಾರದ ಸಂತೆಯು ಅ.8 ಶನಿವಾರ ನಡೆಯಲಿದೆ ಎಂದು ಯಲ್ಲಾಪುರ ಪಟ್ಟಣ ಪಂಚಾಯತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಕುರಿತು ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾ ದಾಸ್ ಪ್ರಕಟಣೆ ನೀಡಿದ್ದು,

ರವಿವಾರದಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬೆಲ್ ರಸ್ತೆಯ ಮೂಲಕ ಮುಸ್ಲಿಂ ಬಾಂಧವರ ಮೆರವಣಿಗೆ ಹಾದುಹೋಗುವುದರಿಂದ ರವಿವಾರ ನಡೆಯಬೇಕಿದ್ದ ವಾರದ ಸಂತೆಯನ್ನು ಶನಿವಾರವೇ ನಡೆಸಲು ನಿರ್ಣಯಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ facebook group – https://www.facebook.com/groups/593852164946589/ join ಆಗಿ








