ಕಾಂಗ್ರೆಸ್ ಮುಖಂಡರೇ ಅಕ್ರಮ ಮತದಾನದ ಆರೋಪ ಮಾಡಿದ್ದಾರೆ. ಈ ಪ್ರಕರಣವು ತನಿಖೆಗೆ ಯೋಗ್ಯವಾಗಿದ್ದು, ಮತಗಳ್ಳತನದ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಬಿಜೆಪಿ ಮುಖಂಡ, ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಆಗ್ರಹಿಸಿದ್ದಾರೆ.

ರಾಮು ನಾಯ್ಕ

ಈ ಕುರಿತು ರವಿವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆಲ್ಲಲು ಶಕ್ಯವಾಗಿದ್ದ ಕಾಂಗ್ರೆಸ್ 2024 ರ ಚುನಾವಣೆಯಲ್ಲಿ 9 ಸ್ಥಾನ ಗೆದ್ದಿದ್ದು ನಮ್ಮ ಸಂಶಯಕ್ಕೂ ಕಾರಣವಾಗಿತ್ತು. ಈಗ ಸ್ವತಃ ಕಾಂಗ್ರೆಸ್ ಪ್ರಮುಖರೇ, 2024 ರ ಲೋಕಸಭೆ ಚುನಾವಣೆಯಲ್ಲಿ, ಕರ್ನಾಟಕದಲ್ಲಿ ಅಕ್ರಮ ಮತದಾನ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದು, ತನಿಖೆಗೂ ಆಗ್ರಹಿಸಿದ್ದಾರೆ.

ನಮ್ಮ ಸಂಶಯವನ್ನು ಪುಷ್ಠೀಕರಿಸಿದ ರಾಹುಲ ಹಾಗೂ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. 2024 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿ ಇತ್ತು. ಆದರೂ ಆ ಪಕ್ಷದ ಮುಖಂಡರೇ ಅಕ್ರಮ ಮತದಾನದ ಆರೋಪ ಮಾಡಿರುವುದರಿಂದ ಈ ಪ್ರಕರಣ ತನಿಖೆಗೆ ಯೋಗ್ಯವಾಗಿದೆ.

ಕಾಂಗ್ರೆಸ್ ಗೆದ್ದ 9 ಲೋಕಸಭಾ ಕ್ಷೇತ್ರಗಳ ಜೊತೆಗೆ, 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ 137 ಕ್ಷೇತ್ರಗಳಲ್ಲೂ ಅಕ್ರಮ ನಡೆದಿರುವ ಸಂಭವ ಇದ್ದು, ಅಲ್ಲಿಯೂ ತನಿಖೆ ಕೈಗೊಳ್ಳಬೇಕಾಗಿ ಚುನಾವಣಾ ಆಯೋಗಕ್ಕೆ ಆಗ್ರಹಿಸುತ್ತೇನೆ ಎಂದು ರಾಮು ನಾಯ್ಕ ತಿಳಿಸಿದ್ದಾರೆ.

ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news

E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur

ನಮ್ಮ FACE BOOK GROUP JOIN ಆಗಿ https://www.facebook.com/groups/593852164946589

LATEST NEWS

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading