ರಾಜ್ಯದಲ್ಲಿಯೇ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಶಿರಸಿಯ ಶ್ರೀಮಾರಿಕಾಂಬಾ ಪ್ರೌಢಶಾಲೆಯಲ್ಲಿ ಗಂಡು ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಕಳೆದ ಹಲವಾರು ತಿಂಗಳಿಂದ ಇಲ್ಲದೇ 700 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅತೀವ ತೊಂದರೆಯಾಗಿದೆ. ಈ ಹಿನ್ನಲೆಯಲ್ಲಿ ಈ ಕೂಡಲೇ ಅಪೂರ್ಣವಾಗಿರುವ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಆಗ್ರಹಿಸಿ ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಗುರುವಾರ ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಜಾಗೀರ್ದಾರ್ ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಫೆಬ್ರುವರಿಯಲ್ಲಿಯೇ ಮುಗಿಯಬೇಕಿದ್ದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈಗಿರುವ ಶೌಚಾಲಯ ಮಕ್ಕಳ ಸಂಖ್ಯೆಗೆ ಏನೂ ಸಾಕಾಗುತ್ತಿಲ್ಲ. ಶಾಲಾ ಸಮಯದಲ್ಲಿ ಮಕ್ಕಳಿಗೆ ಮಧ್ಯಂತರ ವಿಶ್ರಾಂತಿಗಾಗಿ ಇರುವ ಹತ್ತು ನಿಮಿಷದಲ್ಲಿ ಹೊರಗಡೆ ಹೋಗಿ ಮೂತ್ರ ವಿಸರ್ಜನೆ ಮಾಡಿ ಬರುವುದು ಕಷ್ಟವಾಗುತ್ತಿದೆ.

ಹಿನ್ನೆಲೆಯಲ್ಲಿ ಅನೇಕ ಮಕ್ಕಳು ಶಾಲಾ ಸಮಯದಲ್ಲಿ ನೀರು ಕುಡಿಯುವುದನ್ನು ಕಡಿಮೆ ಮಾಡುತ್ತಿದ್ದಾರೆ ಎಂದು ಪಾಲಕರು ಆರೋಪಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತುರ್ತಾಗಿ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ನಿಟ್ಟಿನಲ್ಲಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ಸ್ಪಂದಿಸಿದ ಇಲಾಖೆಯ ಎಇಇ ಬಸವರಾಜ್ ಬಳ್ಳಾರಿ, ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ ಜಾಗಿರ್ದಾರ್ ತುರ್ತಾಗಿ ವ್ಯವಸ್ಥೆ ಮಾಡಿಸುವ ಭರವಸೆ ನೀಡಿದ್ದಾರೆ. ಈ ವೇಳೆ ನಿವೃತ್ತ ಇಂಜಿನಿಯರ್ ವಿ.ಎಂ.ಭಟ್ಟ, ಸಾಮಾಜಿಕ ಧುರೀಣರಾದ ಮನೋಹರ ಮಲ್ಮನೆ, ಅನಂತ ಬಾಳೆಕೊಪ್ಪ, ಮಹಾಬಲೇಶ್ವರ ಹೆಗಡೆ ಇದ್ದರು.

ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news

E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur

ನಮ್ಮ FACE BOOK GROUP JOIN ಆಗಿ https://www.facebook.com/groups/593852164946589

LATEST NEWS

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading