ಉತ್ತರಕನ್ನಡ ಜಿಲ್ಲೆಯಾದ್ಯಂತ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ಮಳೆಯ ರಭಸಕ್ಕೆ ವಿವಿದೆಡೆ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟೂ 18 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 54.9 ಮಿಮೀ, ಭಟ್ಕಳದಲ್ಲಿ 68.9, ಹಳಿಯಾಳ 54.4, ಹೊನ್ನಾವರ, 56.2, ಕಾರವಾರ 75.1, ಕುಮಟಾ 70.1, ಮುಂಡಗೋಡ 17.9, ಸಿದ್ದಾಪುರ 61.4, ಶಿರಸಿ 48.3, ಸೂಪಾ 90.6, ಯಲ್ಲಾಪುರ 40.4, ದಾಂಡೇಲಿಯಲ್ಲಿ 68.5 ಮಿಲಿ ಮೀಟರ್ ಮಳೆ ಸುರಿದಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆ.20 ಬುಧವಾರದಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ, ಜೋಯಿಡಾ ತಾಲೂಕುಗಳ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading