ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು, ಮಹಿಳೆಯರು ಆಗಮಿಸುವುದರಿಂದ, ಕೆಲ ಯುವಕರು ಮದ್ಯಪಾನ ಮಾಡಿ ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ತೊಂದರೆಯನ್ನುಂಟು ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಯಿರುವುದರಿಂದ ಆ.27 ರಿಂದ ಸೆ.13 ರವರೆಗೆ ಭಟ್ಕಳ, ಕಾರವಾರ, ಶಿರಸಿ ಹಾಗೂ ದಾಂಡೇಲಿ ಉಪ ವಿಭಾಗದ ತಾಲೂಕುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ಬೆಳಗ್ಗೆ 6 ಗಂಟೆಯವರೆಗೆ ವೈನ್ ಶಾಪ್ ಮತ್ತು ಬಾರ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ ಲಕ್ಷೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಭಟ್ಕಳ ಶಹರ ವ್ಯಾಪ್ತಿಯಲ್ಲಿ ಆ.29 ರ ಬೆಳಗ್ಗೆ 6 ಗಂಟೆಯಿಂದ ಆ.31 ರ 24 ಗಂಟೆಯವರೆಗೆ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.27 ರ ಬೆಳಗ್ಗೆ 6 ಗಂಟೆಯಿಂದ ಆ.29 ರ 24 ಗಂಟೆಯವರೆಗೆ, ಮುರ್ಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಸೆ.2 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.27 ರ ಬೆಳಗ್ಗೆ 6 ಗಂಟೆಯಿಂದ ಆ.31 ರ ರಾತ್ರಿ 24 ಗಂಟೆಯವರೆಗೆ, ಸೆ.2 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ ಸೆ.2 ರ 24 ಗಂಟೆಯವರೆಗೆ, ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಸೆ.3 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಸೆ.5 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.30 ರ ಬೆಳಗ್ಗೆ 6 ಗಂಟೆಯಿಂದ ಆ.31 ರ 24 ಗಂಟೆಯವರೆಗೆ, ಸೆ.2 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ.

ಕಾರವಾರ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಸೆ.2 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಸೆ.4ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಸೆ.6ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಮಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಸೆ.2ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ ಸೆ.4 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಸೆ.2ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಸೆ.4 ರ ಬೆಳಗ್ಗೆ 6 ಗಂಟೆಯಿಂದ ಸೆ.7 ರ ಬೆಳಗ್ಗೆ 6 ಗಂಟೆಯವರೆಗೆ.

ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಆ.29 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಆ.31 ರ ಬೆಳಗ್ಗೆ 6 ಗಂಟೆಯಿಂದ ಸೆ.4 ರ 24 ಗಂಟೆಯವರೆಗೆ, ಸೆ.7 ರ ಬೆಳಗ್ಗೆ 6 ಗಂಟೆಯಿಂದ ಸೆ.8 ರ 24 ಗಂಟೆಯವರೆಗೆ, ಸೆ.13 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ ಸೆ.3 ರ ಬೆಳಗ್ಗೆ 6 ಗಂಟೆಯವರೆಗೆ, ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಸೆ.2 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಸೆ.4 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರಗೆ, ಸೆ.8 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ, ಯಲ್ಲಾಪುರ ಪಟ್ಟಣ, ಮಂಚಿಕೇರಿ ಕಿರವತ್ತಿಯಲ್ಲಿ ಸೆ.2ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ ಮತ್ತು ಸೆ.6 ರ ಬೆಳಗ್ಗೆ 6 ಗಂಟೆಯಿಂದ 24 ಗಂಟೆಯವರೆಗೆ.

ದಾಂಡೇಲಿ ಹಾಗೂ ಹಳಿಯಾಳ ತಾಲೂಕು ವ್ಯಾಪ್ತಿಯಲ್ಲಿ ಆ.31 ರ ಬೆಳಗ್ಗೆ 6 ಗಂಟೆಯಿಂದ ಸೆ.1 ರ ಬೆಳಗ್ಗೆ 6 ಗಂಟೆಯವರೆಗೆ, ದಾಂಡೇಲಿ, ಹಳಿಯಾಳ ಹಾಗೂ ಜೋಯಿಡಾ ತಾಲೂಕು ವ್ಯಾಪ್ತಿಯಲ್ಲಿ ಸೆ.2 ರ ಬೆಳಗ್ಗೆ 6 ಗಂಟೆಯಿಂದ ಸೆ.3ರ ಬೆಳಗ್ಗೆ 6 ಗಂಟೆಯವರೆಗೆ, ಸೆ.4 ರ ಬೆಳಗ್ಗೆ 6 ಗಂಟೆಯಿಂದ ಸೆ.5 ರ ಬೆಳಗ್ಗೆ 6 ಗಂಟೆಯವರೆಗೆ, ಹಾಗೂ ಸೆ.6 ರ ಬೆಳಗ್ಗೆ 6 ಗಂಟೆಯಿಂದ ಸೆ.7 ರ ಬೆಳಗ್ಗೆ 6 ಗಂಟೆಯವರೆಗೆ ವೈನ್ ಶಾಪ್ ಮತ್ತು ಬಾರ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ ಲಕ್ಷೀಪ್ರಿಯಾ ಆದೇಶ ಹೊರಡಿಸಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading