ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದಿಂದ ಪ್ರತಿವರ್ಷ ಕೊಡಮಾಡುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ನಂದೊಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ನಾಯ್ಕ ಹಾಗೂ ವಾಯ್.ಟಿ.ಎಸ್.ಎಸ್. ಪ್ರೌಢಶಾಲೆಯ ಶಿಕ್ಷಕಿ ರೂಪಾ ಲಾಡ ಭಾಜನರಾಗಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿಯೂ ಸೇವೆ ಸಲ್ಲಿಸುತ್ತಿರುವ ಭಾಸ್ಕರ ನಾಯ್ಕ ಅವರು, ಶಿಕ್ಷಣ, ಕ್ರೀಡೆ, ವಿಜ್ಞಾನ, ಭಾಷೆ, ಕಲೆ, ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಬೆಳಗುವಲ್ಲಿ ಶ್ರಮಿಸುತ್ತಿದ್ದಾರೆ. ತಾವು ಸೇವೆ ಸಲ್ಲಿಸುತ್ತಿರುವ ನಂದೊಳ್ಳಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿಯಾಗಿ ರೂಪಿಸಿ, ಶಾಲೆಯ ಸುತ್ತಲಿನ ಪರಿಸರವನ್ನು ಹಸಿರುಮಯವಾಗಿಸಿ ಗಮನ ಸೆಳೆದಿದ್ದಾರೆ.

ಈ ಶಾಲೆಯ ಹಲವು ವಿದ್ಯಾರ್ಥಿಗಳು ಭಾಸ್ಕರ ನಾಯ್ಕ ಅವರ ಮಾರ್ಗದರ್ಶನದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

ಶಿಕ್ಷಕಿ ರೂಪಾ ಲಾಡ ಅವರು ವಿದ್ಯಾರ್ಥಿಗಳು ವಿವಿಧ ರಂಗಗಳಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿ ಕೊಳ್ಳುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.

ಈ ಪ್ರಶಸ್ತಿಯನ್ನು ಸೆ.5 ಶುಕ್ರವಾರ ಶಿಕ್ಷಕ ದಿನಾಚರಣೆಯಂದು ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಪ್ರಶಸ್ತಿಗೆ ಭಾಜನರಾದ ಭಾಸ್ಕರ ನಾಯ್ಕ ಹಾಗೂ ರೂಪಾ ಲಾಡ ಅವರನ್ನು ವಿಶ್ರಾಂತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ ಮತ್ತು ಶಿಕ್ಷಕರು, ಸ್ನೇಹಿತರ ಬಳಗದವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading