ಮಲೆನಾಡು ಸಹಕಾರಿ ಸಂಘಕ್ಕೆ 47 ಲಕ್ಷ ರೂ ಲಾಭ: ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ
ಯಲ್ಲಾಪುರ ಪಟ್ಟಣದ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ 47,24,775 ರೂ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ಹೇಳಿದರು.
ಯಲ್ಲಾಪುರ ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ರಜತ ಸಂಭ್ರಮವನ್ನು ಪೂರೈಸಿ, ಈ ವರ್ಷ 26 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಎಲ್ಲರ ಸಹಕಾರದಿಂದ ಸಂಘವು ಪ್ರಗತಿಪಥದಲ್ಲಿ ಮುನ್ನೆಡೆದಿದೆ.
ಸಂಘವು ಯಲ್ಲಾಪುರ, ಮುಂಡಗೋಡ,ಅಂಕೋಲಾ, ಜೋಯ್ಡಾ ಮುಂತಾದ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿನ ರೈತರಿಗೆ ಕೃಷಿ ಉಪಕರಣಗಳು, ಯಂತ್ರಗಳು ಹಾಗೂ ಇನ್ನಿತರ ವಸ್ತುಗಳನ್ನು ಒದಗಿಸುತ್ತಿದ್ದು, ಗ್ರಾಹಕರ ವಿಶ್ವಾಸ ಮತ್ತು ನಂಬಿಕೆ ಗಳಿಸಿದೆ ಎಂದರು.ಸಂಘದಲ್ಲಿ 1099 ಸದಸ್ಯರಿದ್ದು, ಈ ವರ್ಷ ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ ಎಂದು ಮಹಿತಿ ನೀಡಿದರು.
ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.12ರಂದು ಮಧ್ಯಾಹ್ನ 3 ಗಂಟೆಗೆ ಅಡಿಕೆ ಭವನದಲ್ಲಿ ನಡೆಯಲಿದೆ. ಸಭೆಯಲ್ಲಿ 12 ಯುವ ಸಾಧಕ ಕೃಷಿಕರನ್ನು ಸನ್ಮಾನಿಸಿ ಗೌರವಿಸಲಾಗುವುದು : ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ಅಧ್ಯಕ್ಷರು. ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘ.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಂ.ಜಿ.ಭಟ್ಟ ಶಿಗೇಪಾಲ, ನಿರ್ದೇಶಕರಾದ ಜಿ.ಆರ್.ಹೆಗಡೆ ಬೆದೆಹಕ್ಲು, ರವೀಂದ್ರ ಗೌಡ ಮಾವಿನಕಟ್ಟಾ, ರಾಘವೇಂದ್ರ ಭಟ್ಟ ಕಳಚೆ, ದತ್ತಾತ್ರೇಯ ಬೋಳಗುಡ್ಡೆ, ಎಂ.ಪಿ.ಹೆಗಡೆ ಚವತ್ತಿ, ವಾಸು ಭೋವಿ ತುಡುಗುಣಿ, ಮಧುಕೇಶ್ವರ ಭಟ್ಟ, ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಹೆಗಡೆ ಇದ್ದರು.