ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳನ್ನು ಸಂಪರ್ಕಿಸುವ ಗುಳ್ಳಾಪುರ-ಹೆಗ್ಗಾರ್ ನೂತನ ಸೇತುವೆ ನಿರ್ಮಾಣಕ್ಕೆ 35 ಕೋಟಿ ರೂ ಅನುದಾನದ ಮಂಜೂರಾತಿಗೆ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಗುರುವಾರ ಪ್ರತಿಕ್ರಯಿಸಿದ ಅವರು ಈ ಸೇತುವೆ ನಿರ್ಮಾಣದ ಮೂಲಕ ಗ್ರಾಮೀಣ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ. ಈ ನೂತನ ಸೇತುವೆ ನಿರ್ಮಾಣದಿಂದ ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಚೈತನ್ಯಗೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರವೇಶ ಸುಲಭವಾಗಲಿದೆ. ಆರೋಗ್ಯ ಮತ್ತು ತುರ್ತು ಸೇವೆಗಳು ತ್ವರಿತವಾಗಿ ಲಭ್ಯವಾಗುವಂತಾಗುತ್ತದೆ.

ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು ಅನುಕೂಲವಾಗುವಷ್ಟೇ ಅಲ್ಲದೆ ಪ್ರವಾಸೋದ್ಯಮಕ್ಕೂ ಹೊಸ ದಾರಿ ತೆರೆಯಲಿದೆ. ಒಟ್ಟಾರೆ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳ ಅಭಿವೃದ್ಧಿಗೆ ಈ ಯೋಜನೆ ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದಿದ್ದಾರೆ.

ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ, ಶಾಸಕರಾದ ಶಿವರಾಮ ಹೆಬ್ಬಾರ್ ಅವರ ನಿರಂತರ ಪ್ರಯತ್ನದ ಫಲವಾಗಿ, ರಾಜ್ಯ ಸರ್ಕಾರವು 35 ಕೋಟಿ ರೂ ಅನುದಾನ ಮಂಜೂರಿಗೆ ಅನುಮೋದನೆ ನೀಡಿರುವುದು ಈ ಭಾಗದ ಗ್ರಾಮಸ್ಥರಿಗೆ ಹರ್ಷಕ್ಕೆ ಕಾರಣವಾಗಿದೆ.

ಗುರುವಾರ ಶಾಸಕ ಶಿವರಾಮ ಹೆಬ್ಬಾರ್ ಅವರು ಗುಳ್ಳಾಪುರಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading