ಯಲ್ಲಾಪುರ ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಡೋಮಗೇರಿಯಲ್ಲಿ ಇತ್ತೀಚೆಗೆ ಆಕಸ್ಮಿಕವಾಗಿ ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಗುರುವಾರ ಶಾಸಕ ಶಿವರಾಮ ಹೆಬ್ಬಾರ ಸರ್ಕಾರದಿಂದ ಮಂಜೂರಿಯಾದ ಪರಿಹಾರಧನವನ್ನು ವಿತರಿಸಿದರು.

ದುರ್ಘಟನೆಯಲ್ಲಿ ಮೃತರಾದ ಸಾವಿತ್ರಿ ಖರಾತ್ ಹಾಗೂ ಸ್ವಾತಿ ಖರಾತ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ನೀಡಲಾದ ತಲಾ 5 ಲಕ್ಷ ರೂ ಪರಿಹಾರದ ಚೆಕ್ ಅನ್ನು ಮೃತರ ಕುಟುಂಬದವರಿಗೆ ಹಸ್ತಾಂತರಿಸಿದರು. ಜತೆಗೆ ವೈಯಕ್ತಿಕವಾಗಿಯೂ ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ, ಉಪವಿಭಾಗಾಧಿಕಾರಿ ಕಾವ್ಯಾರಾಣಿ, ಗ್ರೇಡ್ 2 ತಹಸೀಲ್ದಾರ ಸಿ.ಜಿ.ನಾಯ್ಕ, ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ, ಪ್ರಮುಖರಾದ ಎನ್.ಕೆ.ಭಟ್ಟ, ಡಾ.ರವಿ ಭಟ್ಟ ಬರಗದ್ದೆ, ಪ್ರಶಾಂತ ಸಭಾಹಿತ, ಮಾಕು ಕೊಕರೆ ಇದ್ದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading