ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಟಯರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

ಅಗ್ನಿಶಾಮಕ ದಳವರು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು.

ಘಟನೆಯಲ್ಲಿ ಟ್ಯಾಂಕರ್ ನ ಹಿಂದಿನ ಎರಡೂ ಟೈಯರ್ ಗಳು ಸುಟ್ಟುಹೋಗಿದ್ದು, ಚಾಲಕ,ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಒಂದು ಗಂಟೆ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading