ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿರಸಿ ಶೈಕ್ಷಣಿಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಯಲ್ಲಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 22ರಂದು ಯಲ್ಲಾಪುರ ಪಟ್ಟಣದ ಕಾಳಮ್ಮನಗರ ಕ್ರೀಡಾಂಗಣದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ನಡೆಯಲಿದೆ.

ಅಂದು ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕ್ರೀಡಾ ಧ್ವಜಾರೋಹಣ, ಪಥ ಸಂಚಲನ, ಕ್ರೀಡಾ ಜ್ಯೋತಿ ಆಗಮನ, ಕ್ರೀಡಾ ಪ್ರತಿಜ್ಞೆ ನಡೆಯಲಿದೆ. ಹಳಿಯಾಳ, ಜೋಯಿಡಾ, ಮುಂಡಗೋಡ, ಶಿರಸಿ, ಸಿದ್ದಾಪುರ ಮತ್ತು ಯಲ್ಲಾಪುರ ಈ ಆರು ತಾಲೂಕುಗಳ 1200 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, 60 ನಿರ್ಣಾಯಕರು, 40 ಸಹಾಯಕರು ಪಾಲ್ಗೊಳ್ಳಲಿದ್ದಾರೆ.

ಬಾಲಕ, ಬಾಲಕಿಯರಿಗಾಗಿ ಕಬ್ಬಡ್ಡಿ, ಖೋ-ಖೋ, ವ್ಹಾಲಿಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯುತ್ತವೆ. ಪ್ರತಿ ಸ್ಪರ್ಧೆಗೂ 2 ಅಂಕಣಗಳನ್ನು ತಯಾರಿಸಲಾಗಿದೆ. ಪ್ರತಿ ಅಂಕಣಗಳ ಸುತ್ತ ಪ್ರೇಕ್ಷಕರು ಒಳ ಬರದಂತೆ ಬ್ಯಾರಿಕೇಡ್ ನಿರ್ಮಿಸಲಾಗುವುದು.

ಈಗಾಗಲೇ ಅಂಕಣಗಳನ್ನು ನಿರ್ಮಿಸಲಾಗಿದ್ದು, ಮೈದಾನದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಕ್ರೀಡಾಕೂಟವನ್ನು ತಾಲೂಕಿನ ವಿವಿಧ ಸಂಘ ಸಂಸ್ಥೆಗಳು, ಶಿಕ್ಷಕರ ಸಂಘಟನೆಗಳ ಸಹಕಾರದೊಂದಿಗೆ ನಡೆಸಲಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading