ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಜಿಲ್ಲಾಧಿಕಾರಿ ಪರಿಶೀಲನೆ
ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ ನಂದನಗದ್ದಾದಲ್ಲಿ ಸಮೀಕ್ಷೆ ನಡೆಯುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಭೇಟಿ ನೀಡಿ, ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ ಹಾಗೂ ಸಮೀಕ್ಷೆ ಸಿಬ್ಬಂದಿ ಹಾಜರಿದ್ದರು.
ಸಮೀಕ್ಷೆ ಸಮಯದಲ್ಲಿ ದಾಖಲೆ ನೀಡಿ ಸಹಕರಿಸಿ
ಸಮೀಕ್ಷೆ ಸಮಯದಲ್ಲಿ ದಾಖಲೆ ನೀಡಿ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಸಮೀಕ್ಷೆಯನ್ನು ಅಕ್ಟೊಬರ್ 7 ರವರೆಗೆ ನಿಗಧಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯವು ಪ್ರಗತಿಯಲ್ಲಿದ್ದು, ಸಮೀಕ್ಷೆಯ ಸಂದರ್ಭದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
ಈ ಸಮೀಕ್ಷೆಗೆ ದಾಖಲೆಗಳ ಅವಶ್ಯಕತೆ ಇರುವುದರಿಂದ ಎಲ್ಲಾ ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್,ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತರನರಾಗಿದ್ದರೆ UID card ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.