ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಅಕ್ಟೊಬರ್ 2 ರ ವರೆಗೆ (ಯೆಲ್ಲೋ ಅಲರ್ಟ್) ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಈ ಅವಧಿಯಲ್ಲಿ, ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು, ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.

ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು ಎಂದು ಉತ್ತರಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ತುರ್ತು ಸೇವೆಗೆ 24.*7 ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ ಸಂಖ್ಯೆ 08382-229857 ಹಾಗೂ ವಾಟ್ಸಪ್ ಸಂಖ್ಯೆ 9483511015 ನ್ನು ಸಂಪರ್ಕಿಸಬಹುದು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading