ತಾಲೂಕಾ ಕಾನೂನು ಸೇವಾ ಸಮೀತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಯಲ್ಲಾಪುರ ಪಟ್ಟಣದ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸೋಮವಾರ ರಾಷ್ಟ್ರೀಯ ಪೌಷ್ಟಿಕಾಂಶ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿವಿಲ್ ನ್ಯಾಯಾಧೀಶರಾದ ಅನಿತಾ ಕುಮಾರಿ ಮಾತನಾಡಿ, ನಾವು ನಿತ್ಯ ಪೌಷ್ಟಿಕಾಂಶಯುಕ್ತವಾದ ಆಹಾರವನ್ನು ಸೇವಿಸಬೇಕು, ಜಂಕ್ ಫುಡ್ ಗಳ ಬಳಕೆಯನ್ನು ಕಡಿಮೆಗೊಳಿಸಬೇಕು. ಉತ್ತಮ ಆಹಾರ ಪದ್ಧತಿ ಹಾಗೂ ಉತ್ತಮ ಜೀವನ ಪದ್ಧತಿಯನ್ನು ರೂಢಿಸಿಕೊಂಡರೆ ಆರೋಗ್ಯಕರ ಜೀವನ ನಡೆಸಬಹುದು. ನಮ್ಮ ಮಕ್ಕಳಿಗೂ ನಿತ್ಯ ಪೌಷ್ಟಿಕ ಆಹಾರಗಳನ್ನು ನೀಡಬೇಕು ಎಂದರು.

ತಹಶೀಲ್ದಾರ ಚಂದ್ರಶೇಖರ ಹೊಸಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್, ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಭಟ್ಟ, ರಾಷ್ಟ್ರೀಯ ಪೌಷ್ಟಿಕಾಂಶ ದಿನದ ಕುರಿತು ಉಪನ್ಯಾಸ ನಡೆಯಿತು. ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು ಇದ್ದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading