ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾದನಸರದಲ್ಲಿ ನಡೆದಿದೆ.

ಮಾದನಸರದ ಮಹೇಶ ತಂದೆ ಜಟ್ಟಿ ಪಟಗಾರ (29) ಎಂಬ ಯುವಕ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ 9.15 ಗಂಟೆಯ ನಡುವಿನ ಅವಧಿಯಲ್ಲಿ ಮಾದನಸರದ ತನ್ನ ಮನೆಯ ರೂಮಿನ ಕಟ್ಟಿಗೆ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನ ತಂದೆ ಜಟ್ಟಿ ಪಟಗಾರ ಈ ಸಾವಿನಲ್ಲಿ ಯಾವುದೇ ಸಂಶಯ ಇಲ್ಲ ಎಂದು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading