ಯಲ್ಲಾಪುರಕ್ಕೆ ಅ.ಕ.ಪಿಂ.ವಂ.ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ರಾಜ್ಯಾಧ್ಯಕ್ಷ ಹನುಮಂತಪ್ಪ ಭೇಟಿ
ಅಖಿಲ ಕರ್ನಾಟಕ ಪಿಂಚಣಿ ವಂಚಿತರ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ (ರಿ) ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಜಿ ಹನುಮಂತಪ್ಪ ಅವರು ಸೋಮವಾರ ಯಲ್ಲಾಪುರಕ್ಕೆ ಭೇಟಿನೀಡಲಿದ್ದಾರೆ.
ಜಿ ಹನುಮಂತಪ್ಪ
ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಸಂಘದ ಕಾರ್ಯ ಚಟುವಟಿಕೆಗಳ ಸಲುವಾಗಿ ಹಾಗೂ ಸಂಘದ ಬಲವರ್ಧನೆಗಾಗಿ ಮತ್ತು ರಾಜ್ಯದಾದ್ಯಂತ ಏಕರೂಪದ ಅನುದಾನಿತ ಶಾಲಾ ಕಾಲೇಜುಗಳ ಒಂದು ಸಮನ್ವಯ ಸಮಿತಿಯನ್ನು ರಚಿಸಿ ಅನುದಾನಿತ ಶಾಲಾ ಕಾಲೇಜುಗಳ ಸಮಸ್ಯೆಗಳ ಕುರಿತಾಗಿ ಈಗಾಗಲೇ ಹಲವಾರು ವರ್ಷಗಳಿಂದ ನಡೆಸಿಕೊಂಡು ಬಂದಿರುವಂತಹ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸಲು ಹಾಗೂ ಏಕರೂಪತೆಯನ್ನು ತರಲು ಎಲ್ಲಾ ಅನುದಾನಿತ ಸಂಸ್ಥೆಗಳ ನಡುವೆ ಸಮನ್ವತೆಯನ್ನು ಸಾಧಿಸಲು ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಸಂಘದ ದ್ಯೇಯೋದ್ದೇಶ ಹಾಗೂ ಸಂಘದ ಕುರಿತಾಗಿ ಮಾಹಿತಿಗಳು ಮತ್ತು ಸಂಘಟನೆಗಳನ್ನು ಮಾಡುತ್ತಿದ್ದು,
ಅ. 6 ರಂದು ಶೈಕ್ಷಣಿಕ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೋಲಿ ರೋಜರಿ ಪ್ರೌಢಶಾಲೆಗೆ ಭೇಟಿ ನೀಡಿ ಅಲ್ಲಿ ಸಿರ್ಸಿ ಶೈಕ್ಷಣಿಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆಗಳಿಂದ ಹಿಡಿದು ಪದವಿಯವರೆಗಿನ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಕರನ್ನ ಉಪನ್ಯಾಸಕರನ್ನ ಭೇಟಿಯಾಗಿ ಸಂಘದ ಕುರಿತಾಗಿ ಮಾಹಿತಿಗಳನ್ನು ನೀಡಲಿದ್ದಾರೆ. ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಸಂಘಟನೆಗಳನ್ನು ಬಲಗೊಳಿಸುತ್ತಾ ಬಂದಿರುತ್ತಾರೆ,
ಅಂದಿನ ಕಾರ್ಯಕ್ರಮದಲ್ಲಿ ರಾಜ್ಯದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಶಿಕ್ಷಕರು ಆಗಮಿಸಿ ತಮ್ಮ ಅಹವಾಲುಗಳನ್ನು ಹಾಗೂ ಸಂಘದ ಬಲವರ್ಧನೆಗೆ ಬೇಕಾದ ಮಾರ್ಗಸೂಚಿಗಳನ್ನ ತನ್ನ ಮೂಲಕ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಎಲ್ಲರ ಸಹಕಾರವನ್ನು ಅವರು ಬಯಸುತ್ತಾ ಚುನಾಯಿತ ಎಲ್ಲ ಪ್ರತಿನಿಧಿಗಳ ಸಹಯೋಗದೊಂದಿಗೆ ಈ ಒಂದು ಕಾರ್ಯಕ್ರಮವನ್ನು ಸಂಘಟಿಸುತ್ತಿದ್ದಾರೆ. ಸಂಘವನ್ನು ಬಲಪಡಿಸಿ ಅನುದಾನಿತ ಶಾಲೆ ಕಾಲೇಜುಗಳ ಸಮಸ್ಯೆಗಳನ್ನ ಬಗೆಹರಿಸಿಕೊಳ್ಳಲು ಈ ದಿಸೆಯಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.