ಕಲ್ಲಿದ್ದಲು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ರವಿವಾರ ಸಂಜೆ ನಡೆದಿದೆ.

ಲಾರಿ ಪಲ್ಟಿಯಾದ ರಭಸಕ್ಕೆ ಲಾರಿಯಲ್ಲಿ ತುಂಬಿದ್ದ ಕಲ್ಲಿದ್ದಲು ಹೆದ್ದಾರಿಯಲ್ಲಿ ರಾಶಿಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳಕ್ಕೆ ಭೇಟಿನೀಡಿದ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಶ್ರಮಿಸಿದರು.

ಜೆಸಿಬಿ ಬಳಸಿ ಹೆದ್ದಾರಿಯಲ್ಲಿ ಬಿದ್ದ ಕಲ್ಲಿದ್ದಲನ್ನು ಬದಿಗೆ ಸರಿಸುವ ಕೆಲಸ ರಾತ್ರಿಯವರೆಗೂ ಭರದಿಂದ ನಡೆಯಿತು. ಹೆದ್ದಾರಿಯ ಎರಡೂ ಬದಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading