ಕನ್ನಡ ರಾಜ್ಯೋತ್ಸವದ ಅಂಗವಾಗಿ ಯಲ್ಲಾಪುರ ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಬೆಳಿಗ್ಗೆ ಧ್ವಜಾರೋಹಣ ಹಾಗೂ ಧ್ವಜವಂದನೆ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ನೆರವೇರಿಸಿದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜಿ.ಎನ್.ಭಟ್ ತಟ್ಟಿಗದ್ದೆ ಮಾತನಾಡಿ, ನಮ್ಮ ಭಾಷೆ, ನಮ್ಮ ನೆಲ, ನಮ್ಮ ಜಲದ ಬಗ್ಗೆ ನಮಗೆ ಇನ್ನಷ್ಟು ಅಭಿಮಾನ, ಗೌರವ ಮೂಡಿಬರಬೇಕು. ನಮ್ಮ ಮಾತೃಭಾಷೆಯಾದ ಕನ್ನಡವನ್ನು ನಿತ್ಯ ಜೀವನದಲ್ಲಿ ಹೆಚ್ಚು,ಹೆಚ್ಚು ಬಳಸುವ ಮೂಲಕ ಮಾತೃಭಾಷೆಯನ್ನು ಉಳಿಸಲು, ಬೆಳೆಸಲು ಕಾರ್ಯೋನ್ಮುಖರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಖಜಾಂಚಿ ಡಿ.ಎನ್.ಗಾಂವ್ಕಾರ್, ಗೌರವ ಕಾರ್ಯದರ್ಶಿ ಸಂಜೀವ ಹೊಸಕೇರಿ, ಆಜೀವ ಸದಸ್ಯರಾದ ಬೀರಣ್ಣ ನಾಯಕ ಮೊಗಟಾ, ಸುಬ್ರಾಯ ಬಿದ್ರೆಮನೆ, ಕೃಷ್ಣ ಭಟ್ಟ ನಾಯಕನಕೆರೆ, ಉಲ್ಲಾಸ ಶಾನಭಾಗ, ಡಿ.ಜಿ.ಹೆಗಡೆ ಹಾಗೂ ಸಾರ್ವಜನಿಕರು ಇದ್ದರು. ವಾಯ್.ಟಿ.ಎಸ್.ಎಸ್.ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading