ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಯಲ್ಲಾಪುರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶರಾದ ಅನಿತಾಕುಮಾರಿ ಉದ್ಘಾಟಿಸಿ ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಭಟ್ಟ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ಯಾನಲ್ ವಕೀಲರಾದ ಬಿ.ಬಿ.ಅಮೀನಾ ಶೇಖ್ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು. ವಕೀಲರಾದ ಎನ್.ಆರ್.ಭಟ್ಟ, ವಕೀಲರ ಸಂಘದ ಕಾರ್ಯದರ್ಶಿ ನಾಗರಾಜ ಎಂ.ಬಿ. ಸಹಾಯಕ ಸರ್ಕಾರಿ ಅಭಿಯೋಜಕರಾದ ಚೇತನ ನಾಯ್ಕ, ಝೀನತ್ ಭಾನು ಶೇಕ್ ಮುಂತಾದವರು ಇದ್ದರು. ಸುಧಾಕರ ನಾಯ್ಕ ನಿರ್ವಹಿಸಿದರು.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading