ರಾಜ್ಯದಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕಪಡೆ ತಂಡ ರಚನೆ ಮಾಡಲು ಅರ್ಹ ಎನ್.ಸಿ.ಸಿ. ‘ಸಿ’ ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತಂಡಕ್ಕೆ ಎನ್‍ಸಿಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 21 ರಿಂದ 35 ವರ್ಷದೊಳಗಿನವರಾಗಿದ್ದು, ದೈಹಿಕ ಸದೃಢತೆ ಮತ್ತು ಸ್ಥಳೀಯ ನಿವಾಸಿಯಾಗಿರಬೇಕು ಹಾಗೂ ಉತ್ತಮ ನಡವಳಿಕೆ, ಸಂವಹನ ಕಲೆ, ಕಾರ್ಯದಕ್ಷತೆ ಹೊಂದಿರಬೇಕು.

ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಎರಡು ಶಿಪ್ಟ್ ಗಳಲ್ಲಿ ಕೆಲಸ ನಿರ್ವಹಿಸಲು ಸಿದ್ದರಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಿ.ಎಸ್.ಎನ್.ಎಲ್ ಕಚೇರಿ ಎದುರುಗಡೆ, ಕಾರವಾರ ಇಲ್ಲಿಗೆ ನ.15 ರೊಳಗಾಗಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading